Sunday, April 20, 2025
Google search engine

Homeರಾಜ್ಯಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯಸಭೆ

ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯಸಭೆ

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಸಂಬಂಧ ಇಂದು ಮಧ್ಯಾಹ್ನ 12:45 ಕ್ಕೆ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಸರ್ಕಾರದ ಎಸಿಎಸ್, ಗೃಹ ಇಲಾಖೆ ಅಧಿಕಾರಿಗಳು, ಡಿಜಿಪಿ ಅಲೋಕ್ ಮೋಹನ್, ಎಡಿಜಿಪಿ, ಮೈಸೂರು ಡಿಸಿಸಿ, ಹಾಗೂ ಕಮಿಷನರ್ ಭಾಗವಹಿಸಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ವೈಫಲ್ಯ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ವರದಿಯಾಗಿತ್ತು.

ಸಚಿವ ಸ್ಥಾನವನ್ನು ತಪ್ಪಿಸಿಕೊಂಡು ಕೋಮು ಗಲಭೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಂಡಿದ್ದರೂ, ಮುಂದೆ ಇಂತಹ ಘಟನೆಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುವ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular