ಬೆಳಗಾವಿ : ನಿನ್ನೆ ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದರು. ಈ ವೇಳೆ ಈ ಒಂದು ಹೋರಾಟದಲ್ಲಿ ಪ್ರತಿಭಟನಾಕಾರರು ಹಿಂಸಾತ್ಮಕ ಪ್ರತಿಭಟನೆ ನಡೆಸಿ ಪೊಲೀಸರ ವಾಹನಗಳ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಹೌದು ಬೆಳಗಾವಿಯಲ್ಲಿ 2ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ.
ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ FIR ದಾಖಲಾಗಿದೆ.ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.