ಮಂಡ್ಯ: ಕುರಿಗಳ ಹಿಂಡಿನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದು ಸುಮಾರು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸುಂಕಟತೊಣ್ಣೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಣ್ಣೇಗೌಡ ಎಂಬುವವರಿಗೆ ಸೇರಿದ ಕುರಿಗಳು.
ಮನೆಯ ಮುಂಭಾಗ ಕುರಿಗಳನ್ನ ಕಟ್ಟಿ ಶಿವಣ್ಣೇಗೌಡ ಕುಟುಂಬ ಜಮೀನಿಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕುರಿಗಳ ಹಿಂಡಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.
ಸೂಕ್ತ ಪರಿಹಾರ ನೀಡುವಂತೆ ಕುರಿ ಮಾಲೀಕ ಶಿವಣ್ಣಗೌಡ ಆಗ್ರಹಿಸಿದ್ದು , ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಕುರಿಗಳ ಪಂಚನಾಮೆ ನಡೆಸಿದರು. ಇಲಾಖೆಯಿಂದ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ಭರವಸೆಯನ್ನು ನೀಡಿದ್ದಾರೆ.