Thursday, April 3, 2025
Google search engine

Homeರಾಜ್ಯದುಂಡಾವರ್ತನೆಗೆ ಕಠಿಣ ಕ್ರಮ : ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ದುಂಡಾವರ್ತನೆಗೆ ಕಠಿಣ ಕ್ರಮ : ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ಬೆಂಗಳೂರು : `ಒಂದು ವೇಳೆ ಅವರು ಗದ್ದಲ ಸೃಷ್ಟಿಸುವುದನ್ನು ಮತ್ತು ಸ್ಪೀಕರ್’ ಪೀಠವನ್ನು ಅವಮಾನಿಸುವುದನ್ನು ಮುಂದುವರಿಸಿದರೆ, ನಾನು ಅವರ ವಿರುದ್ಧ ಒಂದು ವರ್ಷದ ಅಮಾನತು ಸೇರಿದಂತೆ ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ” ಎಂದು ಸ್ಪೀಕರ್ ಎಚ್ಚರಿಕೆ ನೀಡಿದ್ದಾರೆ.

ಶಾಸಕರನ್ನು ಅಮಾನತುಗೊಳಿಸುವ ನಿರ್ಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ಪಾತ್ರವಿಲ್ಲ. ಸದನದ ಘನತೆ, ಸಭಾಪತಿ, ಸಂವಿಧಾನ ಮತ್ತು ರಾಜ್ಯದ ಗೌರವವನ್ನು ಎತ್ತಿಹಿಡಿಯುವ ಸಲುವಾಗಿ ಈ ನಿರ್ಧಾರ ಅಗತ್ಯವಾಗಿತ್ತು ಎಂದು ಖಾದರ್ ತಿಳಿಸಿದ್ದಾರೆ.

ಈ ಹಿಂದೆ ಇಂತಹ ಘಟನೆಗಳು ನಡೆದರೂ ಈ ರೀತಿಯ ಶಿಕ್ಷೆ ನೀಡಲಾಗಿಲ್ಲ ಎಂದಾದರೆ ಅದು ಹಿಂದಿನ ಸ್ಪೀಕರ್‌ಗಳಿಗೆ ಆ ಧೈರ್ಯ ಇರಲಿಲ್ಲ ಎಂದು ಅರ್ಥ. ಅದರಿಂದಾಗಿಯೇ ಶಾಸಕರು ಏನೂ ಆಗದು ಎಂಬ ಧೈರ್ಯದಲ್ಲಿ ಈ ರೀತಿ ವರ್ತಿಸಿ ರಾಜ್ಯದ ಘನತೆಗೆ ಕುಂದು ತಂದಿದ್ದಾರೆ. ಧನ ವಿನಿಯೋಗದ ಬಿಲ್ ಮಂಜೂರು ಆಗುವುದು ಕೊನೆಯ ದಿನದಂದು. ಅದನ್ನು ತಡೆಯುವ ಉದ್ದೇಶದಿಂದಲೇ ಈ ಕೃತ್ಯ ನಡೆದಿದೆ ಎಂದರು.

ಧನ ವಿನಿಯೋಗ ಬಿಲ್ ಮಂಜೂರು ಆಗದಿದ್ದರೆ, ವೇತನ ಪಾವತಿ, ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುತ್ತದೆ. ಮತ್ತೆ ಬಿಲ್ ಮಂಡಿಸಲೂ ಆಗುವುದಿಲ್ಲ. ಅವರ ಆ ವರ್ತನೆಗೆ ಅಧಿವೇಶನ ಮುಗಿಯುವರೆಗೆ ಮಾತ್ರ ಮಾಡಿದರೆ, ಕೊನೆಯ ದಿನ ಈ ರೀತಿ ಮಾಡುವುದರಿಂದ ತಮಗೇನು ತೊಂದರೆ ಆಗದು ಎಂಬ ಕಲ್ಪನೆ ದೂರವಾಗಬೇಕು. ರಾಜ್ಯದಲ್ಲಿ ಸದನಕ್ಕಿಂತ ದೊಡ್ಡ ಸಂವಿಧಾನ ಸಂಸ್ಥೆ ಬೇರಿಲ್ಲ. ಅಧ್ಯಕ್ಷ ಪೀಠಕ್ಕಿಂತ ದೊಡ್ಡದು ಅಲ್ಲಿ ಬೇರೆ ಇಲ್ಲ ಎಂಬ ಅರಿವು ಶಾಸಕರಿಗೆ ಇರಬೇಕು. ಸಭಾಧ್ಯಕ್ಷನಾಗಿ ಈ ರೀತಿಯ ವರ್ತನೆ ಸಹಿಸಲು ಅಸಾಧ್ಯ ಹಾಗಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದರು.

ಭಿನ್ನಾಭಿಪ್ರಾಯವೇ ಪ್ರಜಾಪ್ರಭುತ್ವದ ಸೌಂದರ್ಯ ಎಂದ ಖಾದರ್, ಹನಿ ಟ್ರ್ಯಾಪ್ ಆರೋಪಗಳ ಬಗ್ಗೆ ತನಿಖೆ ನಡೆಸುವುದಾಗಿ ಮತ್ತು ಸಿಬಿಐ ತನಿಖೆಗೆ ಅವರ ಬೇಡಿಕೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ ನಂತರವೂ ಅಂತಹ ಪ್ರತಿಭಟನೆಯ ಅಗತ್ಯವಿಲ್ಲ ಎಂದರು.

ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಭವ್ಯವಾದ ವಿಧಾನಸೌಧ ಕಟ್ಟಡಕ್ಕೆ ಶಾಶ್ವತ ದೀಪಾಲಂಕಾರದ ಕೆಲಸಗಳು ಪೂರ್ಣಗೊಂಡಿವೆ ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಸ್ಪೀಕರ್ ತಿಳಿಸಿದರು.

ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ ೬ ರಿಂದ ರಾತ್ರಿ ೯ ರವರೆಗೆ ವಿಧಾನಸೌಧವನ್ನು ದೀಪಾಲಂಕಾರ ಮಾಡಲಾಗುವುದು. ಇಲ್ಲಿಯವರೆಗೆ, ರಾಷ್ಟ್ರೀಯ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿತ್ತು ಮತ್ತು ಇದಕ್ಕೆ ೧೫ ಲಕ್ಷದಿಂದ ೨೦ ಲಕ್ಷ ರೂ. ವೆಚ್ಚವಾಗುತ್ತಿತ್ತು ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular