Friday, April 18, 2025
Google search engine

Homeರಾಜ್ಯಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

ಮುಂಬೈ: ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ.

ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ರಕ್ಷಣೆ ತುಂಬಾ ಮುಖ್ಯವಾದದ್ದು. ಯಾವುದೇ ರಾಜ್ಯ ಸರ್ಕಾರಗಳು ಮಹಿಳೆಯರ ವಿರುದ್ಧ ನಡೆಯುವ ಅಪರಾಧವನ್ನು ಕ್ಷಮಿಸಬಾರದು. ಅಪರಾಧಿ ಯಾರೇ ಇರಲಿ ರಕ್ಷಿಸುವ ಕೆಲಸ ಮಾಡಬಾರದು. ಮಹಿಳೆಯರ ಮೇಲೆ ಅಪರಾಧ ಎಸಗಿದರೆ ಕಟ್ಟುನಿಟ್ಟಿನ ಕಾನೂನಿನ ಮೂಲಕ ಶಿಕ್ಷೆ ನೀಡಲಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಲಕ್‌ಪತಿ ದೀದಿ ಯೋಜನೆಯ ಬಗ್ಗೆ ಮಾತನಾಡಿದ ಅವರು, ಮಹಿಳೆಯರು ಸ್ವಂತವಾಗಿ ೧ ಲಕ್ಷ ರೂ. ವಾರ್ಷಿಕ ಆದಾಯ ಗಳಿಸಬಹುದು. ಮಹಿಳೆಯರು ಕೃಷಿ ಮತ್ತು ಇನ್ನಿತರ ವ್ಯವಹಾರ ಮಾಡುವುದರ ಮೂಲಕ ತಿಂಗಳಿಗೆ ಸುಮಾರು ೧೦,೦೦೦ ರೂ. ಆದಾಯ ಮಾಡಬಹುದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular