Tuesday, July 7, 2026
Google search engine

Homeರಾಜ್ಯನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ : ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ : ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಕಲಬುರಗಿ : ರಾಜ್ಯದ ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಜನಪರ ಕೆಲಸಗಳನ್ನು ಚುರುಕುಗೊಳಿಸಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿ ನಡೆದ ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಅಧಿಕಾರಿಗಳಿಗೆ ಎಚ್ಚರಿಕೆ: ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ಯಾವುದೇ ಲೋಪವನ್ನು ಸರ್ಕಾರ ಸಹಿಸುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ನೆಪಗಳನ್ನು ಕೇಳುವ ಪ್ರಶ್ನೆಯೇ ಇಲ್ಲ; ಫಲಿತಾಂಶವೇ ಮುಖ್ಯ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಜನಸೇವೆಯೇ ಗುರಿ: ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವದಲ್ಲಿ ಬದ್ಧತೆ ವ್ಯಕ್ತಪಡಿಸಿದ ಸಿಎಂ, ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು ಎಂದರು. ತಾನು ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿ ಆಡಳಿತ ಅನುಭವ ಹೊಂದಿರುವುದರಿಂದ, ಕೆಳಹಂತದ ಸಮಸ್ಯೆಗಳ ಅರಿವಿದೆಯೆಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ: ಮತದಾನದ ಹಕ್ಕಿನ ರಕ್ಷಣೆ ಸರ್ಕಾರದ ಜವಾಬ್ದಾರಿ. ಬಿಎಲ್ಒಗಳು (BLO) ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಅರ್ಹ ಮತದಾರರ ಹೆಸರನ್ನು ಸೇರ್ಪಡೆ ಮಾಡಬೇಕು. ಇದರಲ್ಲಿ ಯಾವುದೇ ರಾಜಕೀಯ ಬೇಡ, ಅರ್ಹ ಮತದಾರರು ಹೊರಗುಳಿಯಬಾರದು ಎಂದು ಸೂಚಿಸಿದರು.

ಜಲ ನಿರ್ವಹಣೆ ಹಾಗೂ ಅಭಿವೃದ್ಧಿ: ಅಂತರರಾಜ್ಯ ನದಿ ಜೋಡಣೆ (ಕೃಷ್ಣ, ಕಾವೇರಿ, ಗೋದಾವರಿ) ಯೋಜನೆಗೆ ಸುಮಾರು 1 ಲಕ್ಷ ಕೋಟಿ ರೂ. ವೆಚ್ಚದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.

ಯೋಜನೆಗಳ ಮುಂದುವರಿಕೆ: ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಆರಂಭವಾದ ಅಭಿವೃದ್ಧಿ ಕಾಮಗಾರಿಗಳನ್ನು ಯಥಾವತ್ತಾಗಿ ಮುಂದುವರಿಸಲಾಗುವುದು. ಆಡಳಿತದಲ್ಲಿ ಜನಕೇಂದ್ರಿತ ದೃಷ್ಟಿಕೋನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

"ಜನತೆ ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಫಲಿತಾಂಶವೇ ಮುಖ್ಯ, ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ."- ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ.
RELATED ARTICLES
- Advertisment -
Google search engine

Most Popular