Friday, April 11, 2025
Google search engine

Homeರಾಜ್ಯಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು(ದಕ್ಷಿಣ ಕನ್ನಡ): ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ. ಹೀಗಾಗಿ ಈ ಬಗ್ಗೆ ಕಾನೂನಿನಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಲ್ಲಿ  ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸ್ಕ್ಯಾನಿಂಗ್ ಸೆಂಟರ್ ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ. ಅದರ ಜೊತೆಗೆ ಕೆಲವು ಗುಪ್ತಚರ ಮಾಹಿತಿ ಕಲೆ ಹಾಕಬೇಕಿದೆ ಎಂದರು.

ಭ್ರೂಣ ಹತ್ಯೆ ದಂಧೆಯಲ್ಲಿ ಯಾರಿದ್ದಾರೆ, ಯಾರು ಮಾಡ್ತಿದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಜೊತೆ ಆರೋಗ್ಯ ಇಲಾಖೆ ಕೂಡ ಭಾಗಿಯಾಗಬೇಕಿದೆ. ಅವರಿಗೆ ಸಹಕಾರ ಕೊಟ್ಟು ನಿಜಾಂಶ ತಿಳಿಯುವ ಕೆಲಸ ಆಗಬೇಕಿದೆ ಎಂದವರು ಹೇಳಿದರು.ಭ್ರೂಣ ಹತ್ಯೆ ಸಂಬಂಧ ನಾನು ಎಲ್ಲಾ ಕಡೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರಿಂದ ಮಾಹಿತಿ ಪಡೆಯಲಾಗಿದೆ. ಅದರಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದೆ. ಆ ಬಳಿಕ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular