ಗದಗ್: ಕೇಂದ್ರ ಸರ್ಕಾರ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ಗದಗ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಸಿಐಟಿಯು ಸಂಘಟನೆಯಿಂದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ, ಕನಿಷ್ಠ ವೇತನ ರೂ 31500 ನಿಗದಿಗಾಗಿ, ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ತಡೆಯಲು, ಸ್ಕೀಮ್ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಲು, ಮನರೇಗಾ ದುಡಿತದ ದಿನಗಳನ್ನು 200 ಕ್ಕೆ ಹೆಚ್ಚಿಸಲು ,ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಪಡಿಸಲು ,ದುಡಿತದ ಅವಧಿ ದಿನಕ್ಕೆ 12 ಗಂಟೆ ಆದೇಶ ವಾಪಸಾತಿಗಾಗಿ ಹಾಗೂ ವಿದ್ಯುತ್ ಮಸೂದೆ 2020 ಹಿಂಪಡೆಯಲು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ಧರಣಿ ನಡೆಸಲಾಯಿತು. ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಕ್ವಿಟ್ ಇಂಡಿಯಾ ಚಳುವಳಿ ದಿನದಂದು ಕಾರ್ಮಿಕ ಸಂಘಟನೆಗಳಿಂದ ಧರಣಿ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
