Friday, April 11, 2025
Google search engine

Homeವಿದೇಶಚೀನಾದಲ್ಲಿ ಪ್ರಬಲ ಭೂಕಂಪ: 111 ಮಂದಿ ಸಾವು, 230 ಕ್ಕೂ ಹೆಚ್ಚು ಜನರಿಗೆ ಗಾಯ

ಚೀನಾದಲ್ಲಿ ಪ್ರಬಲ ಭೂಕಂಪ: 111 ಮಂದಿ ಸಾವು, 230 ಕ್ಕೂ ಹೆಚ್ಚು ಜನರಿಗೆ ಗಾಯ

ಬೀಜಿಂಗ್: ಚೀನಾದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಿಂಪ ಸಂಭವಿಸಿದ್ದು, ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಾಹಿತಿ ಪ್ರಕಾರ ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು ಅವರನ್ನು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಇದುವರೆಗೂ ಸುಮಾರು ನೂರಕ್ಕೂ ಅಧಿಕ ಮಂದಿ ಸಾವನ್ನಪಿರುವ ಕುರಿತು ವರದಿಯಾಗಿದೆ ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೀನಾದಲ್ಲಿ ಭೂಕಂಪನ ಸಂಭವಿಸುವ ಮುನ್ನ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಅಷ್ಟುಮಾತ್ರವಲ್ಲದೆ ಕೌಂಟಿ, ಡಯೋಜಿ ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ಭೂಕಂಪದಿಂದಾಗಿ ಗರಿಷ್ಠ ಹಾನಿ ಸಂಭವಿಸಿದೆ. ಇಲ್ಲಿ ಅನೇಕ ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಜನರು ಅವಶೇಷಗಳಡಿಯಲ್ಲಿ ಹೂತು ಹೋಗಿದ್ದು, ರಕ್ಷಣಾ ತಂಡಗಳು ಅವರನ್ನು ರಕ್ಷಿಸುವಲ್ಲಿ ನಿರತವಾಗಿವೆ. ಸತ್ತವರ ಮತ್ತು ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಭೂಕಂಪದ ಕೇಂದ್ರಬಿಂದುವು 35.7 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 102.79 ಡಿಗ್ರಿ ಪೂರ್ವ ರೇಖಾಂಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ ಎಂದು CENC ಹೇಳಿದೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಲ್ಲಿ ಸಾಗುತ್ತಿದ್ದು ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಹೆಚ್ಚಿನ ಸೇವೆಗಳಿಗಳಿಗಿ ಸಿಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular