Friday, April 11, 2025
Google search engine

Homeಅಪರಾಧಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯ ರಕ್ಷಣೆ

ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯ ರಕ್ಷಣೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯನ್ನು ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ನಡೆದಿದೆ.

ಮಾಡೂರುವಿನ ಬಾಡಿಗೆ ಮನೆಯಲ್ಲಿ ವಾಸವಿರುವ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿರುವ ಈಕೆ ಭಾನುವಾರ ಬೆಳಿಗ್ಗೆ ಸಮುದ್ರ ತೀರದ ರುದ್ರ ಪಾದೆಯಿಂದ ನೀರಿಗೆ ಜಿಗಿದಿದ್ದಾಳೆ . ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವನು ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಎಳೆಯಲು ಮುಂದಾಗಿದ್ದು, ಈ ವೇಳೆ ಇಬ್ಬರೂ ನೀರುಪಾಲಾಗುವ ಪರಿಸ್ಥಿತಿ ಎದುರಾಗಿತ್ತು.

ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಎಂಬವರು ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನು ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಸಹಕಾರ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular