ಗುಂಡ್ಲುಪೇಟೆ: ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚು ಆಸಕ್ತಿ ಹೊಂದಬೇಕು ಎಂದು ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಸಲಹೆ ನೀಡಿದರು.
ತಾಲೂಕಿನ ಭೀಮನಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಕ್ಕಳ ಕಲಿಕೆ ಸಾಮಥ್ರ್ಯದ ಕುರಿತು ವಿಚಾರಿಸಿ ನಂತರ ಮಾತನಾಡಿದ ಅವರು, ಈಗಾಗಲೇ ಗ್ರಾಪಂ ವತಿಯಿಂದ ಶಾಲೆಗೆ ವಿತರಣೆ ಮಾಡಿರುವ ಡೆಸ್ಕ್, ಟೇಬಲ್ ಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡು ಉತ್ತಮ ರೀತಿಯಲ್ಲಿ ಪಾಠ ಪ್ರವಚನ ಕಲಿತು ತೇರ್ಗಡೆ ಹೊಂದುವ ಮೂಲಕ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಶಾಲೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೂ ಸಹ ವಿದ್ಯಾರ್ಥಿಗಳು ನಮ್ಮ ಗಮನಕ್ಕೆ ತರಬೇಕು. ಅದನ್ನು ನಾವು ಬಗೆಹರಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಕಿಯರು ಹಾಗು ಸಿಬ್ಬಂದಿ ವರ್ಗವರು ಹಾಜರಿದ್ದರು.