Monday, April 21, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿಗಳು ಧೈರ್ಯದಿಂದ ವಾರ್ಷಿಕ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ವಿದ್ಯಾರ್ಥಿಗಳು ಧೈರ್ಯದಿಂದ ವಾರ್ಷಿಕ ಪರೀಕ್ಷೆ ಎದುರಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ


ಬಳ್ಳಾರಿ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ, ಧೈರ್ಯದಿಂದ ವಾರ್ಷಿಕ ಪರೀಕ್ಷೆಗಳನ್ನು ಎದುರಿಸುವಂತೆ ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮುಖ್ಯ ಶಿಕ್ಷಕರಿಗೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ ಸುಧಾರಣೆ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಗರದ ಜಿಲ್ಲಾ ಪಂಚಾಯತ್‌ನ ನಜೀರ್‍ಸಾಬ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಶೇಕಡವಾರು ಫಲಿತಾಂಶ ಉತ್ತಮಗೊಳಿಸಲು ಬೇಕಾದ ಇಲಾಖೆಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಆತ್ಮ ವಿಶ್ವಾಸ ತುಂಬಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಜಿಲ್ಲೆಯಲ್ಲಿನ ಶಾಲೆಗಳಿಗೆ ಅಗತ್ಯಕ್ಕನುಗುಣವಾಗಿ ಅತಿಥಿ ಶಿಕ್ಷಕರನ್ನು ಒದಗಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಯಲ್ಲಿ ಜಿಲ್ಲೆಯನ್ನು ಮುನ್ನಲೆಗೆ ತರಲು ಶಿಕ್ಷಕರು ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎ.ಹನುಮಕ್ಕ, ಜಿಲ್ಲಾ ಬಿಸಿಯೂಟ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ, ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಯೀಮುರ್ ರೆಹಮಾನ್, ಕುರುಗೋಡು ತಾಲೂಕಿನ ಬಿಇಒ ಟಿ.ಎಂ ಸಿದ್ದಲಿಂಗಮೂರ್ತಿ, ಸಿರುಗುಪ್ಪ ತಾಲೂಕಿನ ಬಿಇಒ ಹೆಚ್.ಗುರಪ್ಪ, ಗಣಿತ ವಿಷಯ ಪರಿವೀಕ್ಷಕ ಎಂ.ಬಸವರಾಜ್, ಬಳ್ಳಾರಿ ಪೂರ್ವ ವಲಯದ ಶಿಕ್ಷಣ ಸಂಯೋಜಕ ಗೂಳೆಪ್ಪ, ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಹೆಚ್.ವೀರೇಶಪ್ಪ ಸೇರಿದಂತೆ ಎಲ್ಲಾ ತಾಲೂಕಿನ ಕ್ಷೇತ್ರ ಸಮನ್ವಯ ಅಧಿಕಾರಿಗಳು, ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಗಳು, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕರು ಹಾಗೂ ನಾಲ್ಕು ತಾಲೂಕುಗಳ ಸರ್ಕಾರಿ ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular