Sunday, April 20, 2025
Google search engine

Homeರಾಜ್ಯವಿದ್ಯಾರ್ಥಿಗಳು ಪ್ರಸ್ತುತ ಸಮಾಜದ ಸಮಸ್ಯೆಗಳನ್ನು ಅರಿತು ಸಮಾಜಕ್ಕೆ ಮಾದರಿಯಾಗಿ : ಡಾ. ಅನಂತ ಮೂರ್ತಿ

ವಿದ್ಯಾರ್ಥಿಗಳು ಪ್ರಸ್ತುತ ಸಮಾಜದ ಸಮಸ್ಯೆಗಳನ್ನು ಅರಿತು ಸಮಾಜಕ್ಕೆ ಮಾದರಿಯಾಗಿ : ಡಾ. ಅನಂತ ಮೂರ್ತಿ

ರಾಮನಗರ:ವಿದ್ಯಾರ್ಥಿಗಳು ಪ್ರಸ್ತುತ ಸಮಾಜದ ಸಮಸ್ಯೆಗಳನ್ನು ಅರಿತು ಸಮಾಜಕ್ಕೆ ಮಾದರಿಯಾಗಿ ನಡೆದುಕೊಳ್ಳಬೇಕು ಹಾಗೂ ಬದುಕಿನಲ್ಲಿ ಮುಖ್ಯವಾಗಿ ಶಿಸ್ತು, ನಿರ್ಣಯ ಮತ್ತು ಸಮರ್ಪಣೆಗಳೆಂಬ ತತ್ವಗಳನ್ನು ಅಳವಡಿಸಿಕೊಳ್ಳಬೇಕೆಂದು ಕೋಲಾರ ಸ್ನಾತಕೋತ್ತರ ಅಧ್ಯಯನ ಕೇಂದ್ರದ  ಪ್ರಾಧ್ಯಾಪಕರಾದ ಡಾ. ಅನಂತಮೂರ್ತಿ ಅವರು ತಿಳಿಸಿದರು.

ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ 2022-23ನೇ ಸಾಲಿನ ಸಾಂಸ್ಕೃತಿಕ, ಎನ್.ಎಸ್.ಎಸ್., ರೆಡ್‌ಕ್ರಾಸ್, ರೇಂರ‍್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂತರರಾಷ್ಟ್ರೀಯ ವಾಲಿಬಾಲ್ ಆಟಗಾರರಾದ ಲಕ್ಷಿö್ಮÃನಾರಾಯಣ ಅವರು ಮಾತನಾಡಿ, ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಕ್ರೀಡೆ ಉತ್ತಮ ಸಾಧನ. ಉತ್ತಮ ಕ್ರೀಡಾ ಹವ್ಯಾಸವನ್ನು ಅಳವಡಿಸಿಕೊಂಡರೆ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಯಾವುದೇ ಕ್ರೀಡೆಗೆ ಸಂಬAಧಿಸಿದAತೆ ನನ್ನ ನೆರವು ಪಡೆದುಕೊಳ್ಳಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮುದ್ದೀರಯ್ಯ ಅವರು ಕಾಲೇಜಿನ ಸಮಾರೋಪ ಸಮಾರಂಭವು ನಿಮ್ಮ ಬದುಕಿನ ಒಂದು ಘಟ್ಟ. ಸಾಂಸ್ಕೃತಿಕ ಮತ್ತು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನಿಮ್ಮ ಪ್ರತಿಭೆ ಹೊರಹಾಕುವ ಸುಸಮಯ.  ನಿಮ್ಮ ಭವಿಷ್ಯ ಸುಂದರವಾಗಿರಲಿ ಎಂದು ಆಶಿಸಿದರು.

ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಉಮೇಶ್ ಬಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ವಿಶ್ವನಾಥಯ್ಯ ಎಸ್ ಅವರು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಜಯಶೀಲರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಘವೇಂದ್ರ ರಾಜು ಅವರು ಅವರ ತಾಯಿಯ ನೆನಪಿಗಾಗಿ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಉತ್ತಮ ಅಂಕ ಪಡೆದು ಕಾಲೇಜಿಗೆ  ಹೆಸರು ತಂದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು.

ಕಾಲೇಜಿನ ಎಲ್ಲ ಅಧ್ಯಾಪಕರು, ಬೋಧಕೇತರ ವರ್ಗ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular