Friday, April 11, 2025
Google search engine

Homeರಾಜ್ಯಸುದ್ದಿಜಾಲಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾಮಗಾರಿಗಳ ಯಶಸ್ವಿ ಅನುಷ್ಠಾನ ಅಧಿಕಾರಿಗಳ ಆದ್ಯ ಕರ್ತವ್ಯ - ಶಾಸಕ...

ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾಮಗಾರಿಗಳ ಯಶಸ್ವಿ ಅನುಷ್ಠಾನ ಅಧಿಕಾರಿಗಳ ಆದ್ಯ ಕರ್ತವ್ಯ – ಶಾಸಕ ಡಿ.ರವಿಶಂಕರ್

ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಕ್ಷೇತ್ರಕ್ಕೆ ಬಂದ ಅಭಿವೃದ್ದಿ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕಾದದ್ದು ಅಧಿಕಾರಿಗಳ ಆದ್ಯ ಕರ್ತವ್ಯ ಇದರಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತರು ಮತ್ತು ಸಾರ್ವಜನಿಕರ ಕೆಲಸ ಮಾಡಿಕೊಡುವಾಗ ನೌಕರರು ಸೌಜನ್ಯದಿಂದ ವರ್ತಿಸಿ, ಕಛೇರಿಗಳಿಗೆ ಅಲೆದಾಡಿಸದೆ ಸಕಾಲದಲ್ಲಿ ಅವರುಗಳ ಕೆಲಸ ಮಾಡಿಕೊಡಬೇಕು ಇದಕ್ಕೆ ವಿರುದ್ದವಾಗಿ ನಡೆದುಕೊಳ್ಳುವ ಅಧಿಕಾರಿಗಳು ನಾವು ವರ್ಗಾವಣೆ ಮಾಡಿಸುವ ಮೊದಲೆ ಬೇರೆಡೆ ಹೋಗಬೇಕು ಎಂದರು.

ಡೆಂಗ್ಯೂ ಜ್ವರದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸನ್ನದ್ದರಾಗಬೇಕು ಈವರೆಗೆ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಿಂದ ೪೧ ಪ್ರಕರಣಗಳು ದಾಖಲಾಗಿದ್ದು ೩೦ ಮಂದಿ ಗುಣಮುಖರಾಗಿದ್ದಾರೆ, ಯಾವುದೇ ಸಾವು ಸಂಭವಿಸಿಲ್ಲ ಇದನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ಲಘುವಾಗಿ ಪರಿಗಣಿಸಬಾರದು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಕ್ಷೇತ್ರದ ೩೪ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಅಂಗನವಾಡಿ, ಶಾಲಾ ಕಾಲೇಜು ಕಟ್ಟಡದ ಸುತ್ತ ಮುತ್ತ ಸ್ವಚ್ಚಗೊಳಿಸಿ ಸೊಳ್ಳೆ ನಿಯಂತ್ರಣಕ್ಕೆ ಬೇಕಾಗುವಂತಹಾ ಫಾಗ್ಗಿಂಗ್ ಸೇರಿದಂತೆ ಇನ್ನಿತರ ಔಷಧಿಗಳನ್ನು ಸಿಂಪಡಿಸಬೇಕು ವಿಚಾರದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿ ಪಂಚಾಯಿತಿಗೂ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಗಬೇಕಾಗಿರುವ ಕೆಲಸಗಳನ್ನು ಮಾಡಿಸಬೇಕು ಎಂದು ತಾಕೀತು ಮಾಡಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ನಾಲೆಗಳಿಗೆ ಜು.೧೨ರಂದು ನೀರು ಹರಿಸಲು ನಿರ್ಧರಿಸಲಾಗಿದೆ, ನೀರಾವರಿ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿಯಮದಂತೆ ಮೊದಲು ಕೆರೆ ಕಟ್ಟೆಗಳನ್ನು ತುಂಬಿಸಬೇಕು ಆನಂತರ ನಾಲೆಗಳ ಹೂಳು ತೆಗೆಸಿ ಆಗಬೇಕಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮಳೆ ಮುಂದುವರೆದಲ್ಲಿ ರೈತರು ಕೃಷಿ ಚಟುವಟಿಕೆ ಮಾಡಲು ಜಮೀನುಗಳಿಗೆ ನೀರು ಹರಿಸಬೇಕು ಎಂದು ಸಲಹೆ ನೀಡಿದರು.

ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳು ರೈತರಿಗೆ ಉಪಯುಕ್ತವಾದ ರೀತಿಯಲ್ಲಿ ಕೆಲಸ ಮಾಡುವುದರ ಜತೆಗೆ ಅವರಿಗೆ ಬೇಕಾಗುವಂತಹ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಕಾಲದಲ್ಲಿ ವಿತರಣೆ ಮಾಡಬೇಕು, ಯಾವುದಕ್ಕೂ ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಶಾಸಕ ಡಿ.ರವಿಶಂಕರ್ ರೈತ ಸಂಪರ್ಕ ಕೇಂದ್ರದಲ್ಲಿ ಬೇಜಾವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಿಗೆ ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ದಿನದಿಂದ ದಿನಕ್ಕೆ ವೈಫಲ್ಯ ಹೆಚ್ಚಾಗಿ ಕಾಣುತ್ತಿದ್ದು ಈ ಬಗ್ಗೆ ಪೊಲೀಸರು ನಿಗಾವಹಿಸಬೇಕು ಕೆ.ಆರ್.ನಗರ ಮತ್ತು ಸಾಲಿಗ್ರಾಮ ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ ಇದರ ಜತೆಗೆ ಶಾಲಾ, ಕಾಲೇಜು ಆವರಣದಲ್ಲಿ ಪುಂಡರ ಹಾವಳಿ ತಾಂಡವವಾಡುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿದ್ದು ಇದನ್ನು ಸ್ಥಳೀಯ ಪೊಲೀಸರು ತಡೆಗಟ್ಟಲು ಮುಂದಾಗದಿದ್ದರೆ ಸಂಬoಧ ಪಟ್ಟ ಹಿರಿಯ ಅಧಿಕಾರಿಗಳು ಮತ್ತು ಗೃಹ ಮಂತ್ರಿಗಳಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ವಸತಿ ಶಾಲೆಗಳ ಮುಖ್ಯಸ್ಥರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳ ಆವರಣಗಳಲ್ಲಿ ಶುಚಿತ್ವ ಕಾಪಾಡಬೇಕು ಇದರ ಜತೆಗೆ ಸರ್ಕಾರದ ನಿಯಮದಂತೆ ಗುಣಮಟ್ಟದ ಆಹಾರ ಹಾಗೂ ಎಲ್ಲಾ ರೀತಿಯ ಸವಲತ್ತುಗಳನ್ನು ವಿತರಿಸಬೇಕು ದೂರು ಬಂದಲ್ಲಿ ಸಂಬoಧಪಟ್ಟವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಅಬಕಾರಿ ಇಲಾಖೆಯವರಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸೇರಿದಂತೆ ಇತರ ಇಲಾಖಾಧಿಕಾರಿಗಳು ದೂರು ನೀಡಿದರೂ ಹಾಗೂ ಸಾರ್ವಜನಿಕರು ಸಾಕಷ್ಟು ಬಾರಿ ಲಿಖಿತವಾಗಿ ದೂರು ನೀಡಿದರೂ ಕ್ರಮವಹಿಸುತ್ತಿಲ್ಲ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ ಆದ್ದರಿಂದ ತಾವು ದೂರು ಬಂದಿರುವ ವಿಚಾರಗಳನ್ನು ಮುಂದಿಟ್ಟುಕೊAಡು ಸಾರ್ವಜನಿಕರ ಹಿತ ದೃಷ್ಟಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಬಕಾರಿ ನಿರೀಕ್ಷಕರಿಗೆ ತಾಕೀತು ಮಾಡಿದರು.
ಅರಣ್ಯ ಇಲಾಖೆಯವರು ಸರ್ಕಾರದ ನಿಯಮವನ್ನು ಪಾಲನೆ ಮಾಡುವ ಸಲುವಾಗಿ ಗಿಡ ನೆಟ್ಟಿರುವ ವಿಚಾರವನ್ನು ಪುಸ್ತಕದಲ್ಲಿ ದಾಖಲು ಮಾಡುವ ಬದಲು ಅದನ್ನು ಕಾರ್ಯಗತಗೊಳಿಸಲು ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಡಿ.ರವಿಶಂಕರ್ ಶಾಲಾ ಕಾಲೇಜು ಆವರಣ ಸೇರಿದಂತೆ ವಸತಿ ಶಾಲೆಗಳು ಮತ್ತು ಕೆರೆಕಟ್ಟೆಗಳ ಏರಿ ಹಾಗೂ ದೇವಾಲಯದ ಆವರಣದಲ್ಲಿ ಗಿಡ ಬೆಳೆಸಬೇಕೆಂದು ಹೇಳಿದರು.

ಶಿಕ್ಷಣ ಇಲಾಖೆಯವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ ಶಾಸಕರು ಇದನ್ನು ಇನ್ನಷ್ಟು ಉನ್ನತ್ತೀಕರಣಗೊಳಿಸಲು ಪ್ರಯತ್ನ ಮಾಡಬೇಕು ಹಾಗೂ ಶಾಲಾ ಕಾಲೇಜುಗಳ ಕಟ್ಟಡ ದುರಸ್ಥಿಗೆ ಮತ್ತು ಅವಶ್ಯಕವಿರುವ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕೊಡಿಸಲು ಬದ್ದನಾಗಿದ್ದು ಬೇಕಾಗಿರುವ ಅನುದಾನದ ಬಗ್ಗೆ ಅಂದಾಜು ಪಟ್ಟಿ ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಮತ್ತು ಮಧುಮೇಹ ಪರೀಕ್ಷೆ ಮಾಡುವ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

ತಹಶೀಲ್ದಾರ್‌ಗಳಾದ ಸಿ.ಎಸ್.ಪೂರ್ಣಿಮ, ನರಗುಂದ್, ತಾ.ಪಂ. ಇಒ ಜಿ.ಕೆ.ಹರೀಶ್, ಜಿ.ಪಂನ ನರೇಗಾ ಸಹಾಯಕ ಯೋಜನಾಧಿಕಾರಿ ಸುಬ್ರಮಣ್ಯಶರ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ.ನವೀನ್‌ಕುಮಾರ್, ಡಾ.ಅಶೋಕ್, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಅಣ್ಣಯ್ಯ, ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ರಾಜಾರಾಂ, ಅರಣ್ಯ ಇಲಾಖೆಯ ಎಂ.ಆರ್.ರಶ್ಮಿ, ಟಿ.ವಿ.ಹರಿಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಎಸ್.ಎಂ.ಅಶೋಕ್, ಬಿಸಿಎಂ ಇಲಾಖೆಯ ಚಂದ್ರಕಲಾ, ಮುಖ್ಯಾಧಿಕಾರಿ ಡಾ.ಜಯಣ್ಣ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular