Saturday, June 6, 2026
Google search engine

Homeರಾಜಕೀಯರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿ- ರಣದೀಪ್‌ ಸುರ್ಜೇವಾಲ

ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಯಶಸ್ವಿ- ರಣದೀಪ್‌ ಸುರ್ಜೇವಾಲ

ಬೆಂಗಳೂರು: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಮಲಿಂಗಾರೆಡ್ಡಿ ವಾಪಸ್ ಪಡೆದಿದ್ದು, ಅವರು ಸಚಿವ ಸಂಪುಟದಲ್ಲೇ ಮುಂದುವರಿಯಲಿದ್ದಾರೆ ಎಂದು ರಣದೀಪ್‌ ಸುರ್ಜೇವಾಲ ತಿಳಿಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಹಾಗೂ ತಾವು ಸೇರಿ ಚರ್ಚೆ ನಡೆಸಿದ್ದು, ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದೆವು ಎಂದು ತಿಳಿಸಿದರು. ಎಂಟು ಬಾರಿ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಅವರ ಅನುಭವ ಪಕ್ಷಕ್ಕೆ ಅತ್ಯಂತ ಮೌಲ್ಯಯುತವಾಗಿದೆ ಎಂದರು.

ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು ಬಿಜೆಪಿ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದ ಸುರ್ಜೇವಾಲ, ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಸೇರಿದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿವೆ ಎಂದು ಸಮರ್ಥಿಸಿಕೊಂಡರು. ಕನ್ನಡಿಗರ ಕಲ್ಯಾಣಕ್ಕಾಗಿ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸುತ್ತಿದೆ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular