ರಾಮನಗರ: ಮಳೆ ಕೊರತೆಯಿಂದಾಗಿ ಸಾಕಷ್ಟು ಬೆಳೆಗಳುಹಾನಿಯಾಗಿದ್ದು, ಈಗ ಸುರಿದ ಮಳೆಯಿಂದ ಕುಡಿಯುವನೀರಿನ ಸಮಸ್ಯೆಇರುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಅವರು ಇಂದು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬರದಿಂದ ಈ ಬಾರಿ ಮೇವು ಬೆಳೆ ಆಗಿಲ್ಲ,ರಾಜ್ಯದ ೨೨೧ ತಾಲ್ಲೂಕುಗಳಲ್ಲಿ ಬರ ಇರುವುದರಿಂದ ಮೇವು ಬೆಳೆ ಆಗಿರುವುದಿಲ್ಲ ಆದುದರಿಂದ ಸುತ್ತಮುತ್ತಲ ರಾಜ್ಯದಿಂದ ಮೇವು ಬೆಳೆ ಖರೀದಿಸಲು ಜಿಲ್ಲಾಡಳಿತ ಕ್ರಮವಹಿಸುವಂತೆ ತಿಳಿಸಿದರು. ಈಗ ಸುರಿದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಆದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು ಈಗಾಗಲೇ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಕಪ್ಪು ತಲೆಯ ಹುಳು ರೋಗದಿಂದ ತೆಂಗು ಬೆಳೆ ಜಿಲ್ಲೆಯಲ್ಲಿ ಅಂದಾಜು ೧೦೦೦ ಎಕರೆಯಷ್ಟು ನಾಶವಾಗಿದೆ ಇದಕ್ಕೆ ಅಗತ್ಯವಿರುವ ಔಷದಿ ಸಿಂಪಡಿಸುವುದು ಹಾಗೂ ಕಾಲಕ್ರಮೇಣ ಹುಳುಗಳನ್ನು ನಾಶ ಮಾಡುವ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹೆಚ್ಚು ಶ್ರಮವಹಿಸಬೇಕುಎಂದರು. ಈಗಾಗಲೇ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಕೇಂದ್ರ ಸರ್ಕಾರವು ಕಾನೂನಿನ ವ್ಯಾಪ್ತಿಯಲ್ಲೇ ಬರ ಪರಿಹಾರದ ಹಣ ಬಿಡುಗಡೆ ಮಾಡುವುದು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ರಾಮನಗರ ನಗರಸಭೆ ಅಧ್ಯಕ್ಷರಾದ ವಿಜಯಕುಮಾರಿ, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಉಪವಿಭಾಗಾಧಿಕಾರಿ ಬಿನೋಯ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
