ರಾಮನಗರ: ಮಕ್ಕಳ ಎದುರಿಸುವ ಮಾನಸಿಕ ಒತ್ತಡಗಳ ಲಕ್ಷಣವಗಳನ್ನು ಆರಂಭದಲ್ಲಿಯೇ ಗುರುತಿಸಿ, ಯಾವ್ಯದೇ ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತದೆ ಎಂಬ ಆತ್ಮವಿಶ್ವಾಸವನ್ನು ತುಂಬುವ ಮೂಲಕ ಮುಂದೊದು ದಿನ ಅವರು ಸಮಸ್ಯೆ ಅಥವಾ ಇತರೆ ಯಾವ್ಯದೇ ಕಾರಣಗಳಿಂದ ಆತ್ಮಹತ್ಯೆಯಂತಹ ಯತ್ನಗಳಿಗೆ ಪ್ರಯತ್ನಿಸುವ್ಯದನ್ನು ತಪ್ಪಿಸಬಹುದಾಗಿದೆ, ಇದಕ್ಕಾಗಿ ಪೋಷಕರು ಸದಾ ಜಾಗೃತರಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ ಪಿ.ಆರ್ ಅವರು ಕರೆ ನೀಡಿದರು.
ಅವರು ಸೆ. 11 ರ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಿಮ್ಹಾನ್ಸ್ ಸಂಸ್ಥೆ, ಸುರಕ್ಷಾ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಕಂದಾಯ ಭವನದಲ್ಲಿ ಆಯೋಜಿಸಲಾಗಿದ್ದ ಮನೋಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಯಾವುದೇ ಸಮಸ್ಯೆಗಳನ್ನು ಪೋಷಕರೊಂದಿಗೆ ಹಂಚಿಕೊಳ್ಳುವ ಮುಕ್ತವಾತಾವರಣವನ್ನು ಪೋಕಷರು ಕಲ್ಪಿಸಿಕೊಡಬೇಕು. ಮುಖ್ಯವಾಗಿ ಮಕ್ಕಳು ಹೇಳುವುದನ್ನು ಯಾವ್ಯದೇ ಪೂರ್ವಾಗ್ರಹವಿಲ್ಲದೇ ಪೋಷಕರು ಕೇಳಿಸಿಕೊಳ್ಳಬೇಕು, ಅಂತಹ ಸಂದರ್ಭಗಳಲ್ಲಿ ಮಕ್ಕಳು ತಪ್ಪು ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಮಾನಸಿಕ ಒತ್ತಡವನ್ನು ನಿರ್ವಹಿಸಲು ಮುಖ್ಯವಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಪ್ರತಿದಿನ ಕಡ್ಡಾಯವಾಗಿ ಯೋಗ, ಧ್ಯಾನ, ವ್ಯಾಯಾಮ, ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಇದಕ್ಕೆ ಶಾಲೆಯಲ್ಲಿಯೂ ಉತ್ತಮ ವಾತಾವರಣ ಕಲ್ಪಿಸಿಕೊಡಬೇಕು ಎಂದು ಅವರು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ, ಸಮಸ್ಯೆಗಳಿದ್ದವರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲೂ ಕಾನೂನಾತ್ಮಕ ಸಲಹೆ ಹಾಗೂ ನೆರವು ನೀಡಲಾಗುವುದು, ಸಮಾಜದಲ್ಲಿ ಆತ್ಮಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಜಾಗತಿಕವಾಗಿ ಸೆಪ್ಟೆಂಬರ್ 10 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನವನ್ನು ಆಚರಿಸಲಾಗುತ್ತಿದೆ. ಈ ಮೂಲಕ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಜನರು ಆತ್ಮಹತ್ಯೆ ಮಾಡಿಕೊಳ್ಳದಂತೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ, ಇದಕ್ಕೆ ಸಮಾಜದ ನೆರವು ಅತ್ಯಗತ್ಯ, ಮಾನಸಿಕವಾಗಿ ಖಿನ್ನತೆ ಒಳಗಾದವರಿಗೆ ನೆರವು ನೀಡಿ ಅವರ ಮನಃ ಪರಿವರ್ತನೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಕುಮಾರ್ ಕೆ. ಮಾತನಾಡಿ, ಯಾವುದೇ ರೀತಿಯ ಮಾನಸಿಕ ಅನಾರೋಗ್ಯವಿದ್ದಲ್ಲೀ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಯಾವುದೇ ರೀತಿ ಮಾನಸಿಕ ಆರೋಗ್ಯ ಕಾಯಿಲೆಯಿಂದ ಬಳಲುತ್ತಿದರೆ ಉಚಿತ ಆಪ್ತ ಸಮಾಲೋಚನೆ ಗಾಗಿ 14416 ಟೇಲಿ ಮಾನಸ್ ಗೆ ಉಚಿತ ಸಹಾಯವಾಣಿಗೆ ಕರೆಮಾಡುವಂತೆ ಅವರು ತಿಳಿಸಿದರು.
ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ ಮಾತನಾಡಿ, ಮಾನಸಿಕ ಆರೋಗ್ಯ ಸಮಸ್ಯೆ ಇರುವವರು, ಪರೀಕ್ಷಾ ಒತ್ತಡಕ್ಕೆ ಒಳಗಾದವರು, ಕೌಟುಂಬಿಕ ಸಮಸ್ಯೆಯಲ್ಲಿರುವವರು, ಆತ್ಮಹತ್ಯೆ ಆಲೋಚನೆಯಲ್ಲಿರುವವರು, ಮಾದಕ ವಸ್ತು ವ್ಯಸನದಿಂದ ಮುಕ್ತರಾಗಲು ಬಯಸುವವರು ಟೆಲಿ ಮನಸ್ ಶುಲ್ಕ ರಹಿತ ದೂರವಾಣಿ 14416ಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆಯಬಹುದು, ಇದು 24/7 ಹಾಗೂ 365 ದಿನಗಳು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಗ್ರಂಥಪಾಲಕ ಅಧಿಕಾರಿ ಚನ್ನಕೇಶವ, ಮನೋವೈದ್ಯ ಡಾ. ಆದರ್ಶ್, ನಿಮ್ಹಾನ್ಸ್ ಪ್ರಾಂಶುಪಾಲರು ನರ್ಸಿಂಗ್ ಕಾಲೇಜು ಡಾ. ಕಾತ್ಯಾಯಿನಿ, ಬೆಂಗಳೂರು ನಿಮ್ಹಾನ್ಸ್ ಮನೋವೈದ್ಯಕೀಯ ಸಮಾಜಕಾರ್ಯ ಪ್ರಾಧ್ಯಾಪಕ ಡಾ. ಅನೀಶ್. ವಿ ಚೆರಿಯನ್, ಮನೋರೋಗ ತಜ್ಞ ಡಾ. ಶಿವಸ್ವಾಮಿ, ಮನೋರೋಗ ವಿಭಾಗದ ಮುಖ್ಯಸ್ಥರು ಡಾ.ಕೆ. ಜಾನ್ ವಿಜಯ್ ಸಾಗರ್, ನಿಮ್ಹಾನ್ಸ್ ಮನೋರೋಗ ವಿಭಾಗದ ಪ್ರಾಧ್ಯಾಪಕ ಡಾ.ರಾಜೇಂದ್ರ ಕೆ.ಎಂ ಹಾಗೂ ಆರೋಗ್ಯ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಜಿಲ್ಲೆಯಲ್ಲಿ ನಡೆಯುವ ಮಾನಸಿಕ ಆರೋಗ್ಯ ಶಿಬಿರದ ವಿವರ
ಪ್ರತಿ ಸೋಮವಾರ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ, 1ನೇ ಮಂಗಳವಾರ ಕನಕಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ, 1ನೇ ಶುಕ್ರವಾರ ಹಾರೋಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, 2ನೇ ಮಂಗಳವಾರ ಸಾತನೂರು ಸಮುದಾಯ ಆರೋಗ್ಯ ಕೇಂದ್ರ, 2ನೇ ಶುಕ್ರವಾರ ದೊಡ್ಡ ಆಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, 3ನೇ ಮಂಗಳವಾರ ಮಾಗಡಿ ಸಾರ್ವಜನಿಕ ಆಸ್ಪತ್ರೆ ಹಾಗೂ ಸೋಲೂರು ಸಮುದಾಯ ಆರೋಗ್ಯ ಕೇಂದ್ರ, 4ನೇ ಮಂಗಳವಾರ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ, 4ನೇ ಶುಕ್ರವಾರ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮನೋರೋಗ ತಜ್ಞರು ಲಭಿಸುತ್ತಾರೆ ಎಂದು ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.