Monday, April 21, 2025
Google search engine

Homeರಾಜ್ಯಬಿಜೆಪಿ ಟಿಕೆಟ್ ಸಿಗದಿದ್ರು ಮಂಡ್ಯದಲ್ಲೆ ಸುಮಲತಾ ಸ್ಪರ್ಧೆ: ಸುಮಲತಾ ಆಪ್ತ ಹನಕೆರೆ ಶಶಿಕುಮಾರ್

ಬಿಜೆಪಿ ಟಿಕೆಟ್ ಸಿಗದಿದ್ರು ಮಂಡ್ಯದಲ್ಲೆ ಸುಮಲತಾ ಸ್ಪರ್ಧೆ: ಸುಮಲತಾ ಆಪ್ತ ಹನಕೆರೆ ಶಶಿಕುಮಾರ್

ಮಂಡ್ಯ: ಬಿಜೆಪಿ ಟಿಕೆಟ್ ಸಿಗದಿದ್ರು ಮಂಡ್ಯದಲ್ಲೆ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎಂದು ಸುಮಲತಾ ಆಪ್ತ ಹನಕೆರೆ ಶಶಿಕುಮಾರ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಮಂಡ್ಯ ಕಣದಲ್ಲಿ ಇರಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಜೆಪಿ ನಗರ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆದಿದ್ದೇವೆ. ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಸಭೆ ಆಯೋಜನೆ. ಚುನಾವಣೆಯಲ್ಲಿ ಸುಮಲತಾ ಯಾವ ನಿರ್ಧಾರ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದರು.

ಮೋದಿ, ನಡ್ಡ ಅವರನ್ನು ಸುಮಲತಾ ಭೇಟಿ ಮಾಡಿದ್ದಾರೆ. ಟಿಕೆಟ್ ನಮಗೆ ಸಿಗುವ ಭರವಸೆ ಇದೆ. ಇನ್ನು ಟಿಕೆಟ್ ಘೋಷಣೆ ಆಗಿಲ್ಲದೆ ಇರೋದ್ರಿಂದ ಪ್ಲಾನ್ ಬಿ ಬಗ್ಗೆ ಆಲೋಚನೆ ಮಾಡಿಲ್ಲ ಎಂದ ಅವರು, ಮಂಡ್ಯದಿಂದ ಸುಮಲತಾ ಅಂಬರೀಶ್ ಅವರ ಸ್ಪರ್ಧೆ ಖಂಡಿತವಾಗಿ ಇರಲಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular