Friday, April 4, 2025
Google search engine

Homeರಾಜ್ಯಸುದ್ದಿಜಾಲಲೋಕಸಭಾ ಚುನಾಚಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ: ಯತೀಂದ್ರ ಸಿದ್ದರಾಮಯ್ಯ

ಲೋಕಸಭಾ ಚುನಾಚಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ: ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆoದು ವರುಣಾ ಕ್ಷೇತ್ರದ ಮಾಜಿಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ|| ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ವರುಣಾ ಕ್ಷೇತ್ರದ ಕೊಂತಯ್ಯನ ಹುಂಡಿ, ತಗಡೂರು ಗ್ರಾಮಗಳಿಗೆ ಭೇಟಿನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ದೇಶದ ಸಂಪತ್ತು ಪ್ರತಿಯೊಬ್ಬರಿಗೂ ಸಮಾನವಾಗಿ ಹಂಚಿಕೆಯಾಗಬೇಕು. ಆದರೆ ಶೇ. ೯೦% ಜನರಿಗೆ, ಶೇ.೩೦% ರಷ್ಟು ಸಂಪತ್ತು ಸಿಗುತ್ತಿಲ್ಲ. ಹಾಗಾಗಿ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಬಡವರು ಬಡವರಾಗಿಯೇ ಇದ್ದಾರೆ ಎಂದು ವಿಷಾಧ ವ್ಯಕ್ತ ಪಡಿಸಿದ ಅವರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನರಿಗೆ ಸ್ವಲ್ಪವಾದರೂ ಸುಧಾರಿಸಿಕೊಳ್ಳಬೇಕೆಂದು, ಅವರು ಸಹ ಉತ್ತಮ ಜೀವನ ನಡೆಸಬೇಕೆಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎಂಟೇ ತಿಂಗಳಲ್ಲಿ ಕೊಟ್ಟ ೫ ಗ್ಯಾರಂಟಿ ಭರವಸೆಯನ್ನು ಈಡೇರಿಸಿ ಜನರ ಹಣವನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ.

ಬಹುತೇಕ ಜನರಿಗೆ ಎಲ್ಲಾ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ತಲುಪಿಲ್ಲದವರಿಗೆ ಅಧಿಕಾರಿಗಳು ತಲುಪುವಂತೆ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳ ಮೇಲೆ ನೀವೆಲ್ಲರೂ ವಿಶ್ವಾಸವಿಟ್ಟು, ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದರಿಂದ ಅಧಿಕಾರಕ್ಕೆ ಬಂದಿದ್ದೇವೆ. ನಿಮ್ಮ ಭರವಸೆಗಳನ್ನು ಈಡೇರಿಸಿದ್ದೇವೆ. ಆದ್ದರಿಂದ ಮತ್ತೆ ಲೋಕಸಭಾ ಚುನಾವಣೆ ಬರುತ್ತಿದ್ದು, ಆಗಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆoದು ಮನವಿ ಮಾಡಿದ ಅವರು ಜನಸಂಪರ್ಕ ಸಭೆಯಲ್ಲಿ ಬಂದಿರುವ ಅರ್ಜಿಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್ ವಿಜಯ್, ಆಪ್ತ ಸಹಾಯಕ ಪ್ರದೀಪ್‌ಕುಮಾರ್, ಗ್ರಾ.ಪಂ. ಅಧ್ಯಕ್ಷೆ ಚಂದ್ರವತಿ ಬಸವರಾಜು, ಉಪಾಧ್ಯಕ್ಷ ಟಿ.ಎನ್ ಗುರುಮಲ್ಲೇಶ್, ಬಸವಣ್ಣ.ಜೆ, ಗಾರ್ಡನ್ ಮಹೇಶ್, ರತ್ನಮ್ಮ ರವಿಶಂಕರ್, ಎಂ.ಮಹಾದೇವಸ್ವಾಮಿ, ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲೆ ವಸಂತ, ತಹಸೀಲ್ದಾರ್ ಶಿವಕುಮಾರ್ ಎಂ, ಜೆರಾಲ್ಡ್ ರಾಜೇಶ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular