ಮಂಡ್ಯ: ರೈತರ ಕಾವೇರಿ ಹೋರಾಟಕ್ಕೆ ವಕೀಲರು ಸಾಥ್ ನೀಡಿದ್ದು, ಶ್ರೀರಂಗಪಟ್ಟಣದಲ್ಲಿ ಕಲಾಪ ಬಹಿಷ್ಕರಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪರಳಿ ರಚಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಳಿಕ ತಾಲೂಕು ಕಚೇರಿವರೆಗೆ ಮೆರವಣಿಗೆ ತೆರಳಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ತಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ವಕೀಲರು ಒತ್ತಾಯಿಸಿದ್ದಾರೆ.
ನಂತರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.