Friday, September 19, 2025
Google search engine

Homeರಾಜ್ಯಬಾನು ಮುಷ್ತಾಕ್ ಆಯ್ಕೆ ಬಗ್ಗೆ ಸಲ್ಲಿಸಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ವಜಾ : ಸಿಎಂ...

ಬಾನು ಮುಷ್ತಾಕ್ ಆಯ್ಕೆ ಬಗ್ಗೆ ಸಲ್ಲಿಸಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ವಜಾ : ಸಿಎಂ ಸಿದ್ಧರಾಮಯ್ಯ ಸ್ವಾಗತ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವಾಗತಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ ದೊರೆತಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮಗಳ ವೈಷಮ್ಯ ಬಿತ್ತುವ ವಿಚ್ಛಿದ್ರಕಾರಿ ಮನಸುಗಳಿಗೆ ಇನ್ನಾದರೂ ತಾಯಿ ಚಾಮುಂಡೇಶ್ವರಿ ಸದ್ಬುದ್ದಿ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular