Friday, April 11, 2025
Google search engine

Homeಅಪರಾಧಕಾನೂನುಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಒಳ ಮೀಸಲಾತಿಗೆ ಸಮ್ಮತಿ

ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಒಳ ಮೀಸಲಾತಿಗೆ ಸಮ್ಮತಿ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಳ ಮೀಸಲಾತಿಯಿಂದ ಸಮಾನತೆಗೆ ಧಕ್ಕೆಯಾಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ೬:೧ ಬಹುಮತದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳಲ್ಲಿ ಉಪವರ್ಗೀಕರಣವನ್ನು ಅನುಮೋದಿಸಿದ್ದು, ಹೆಚ್ಚು ಅಂಚಿನಲ್ಲಿರುವವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರು. ಪೀಠದಲ್ಲಿದ್ದ ಇತರ ನ್ಯಾಯಾಧೀಶರೆಂದರೆ, ಬಿ.ಆರ್. ಗವಾಯಿ, ವಿಕ್ರಮ್ ನಾಥ್, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಮಿಶ್ರಾ. ಆರು ಪ್ರತ್ಯೇಕ ತೀರ್ಪುಗಳನ್ನು ಬರೆಯಲಾಗಿದೆ.

ಈ ತೀರ್ಪು ಇ.ವಿ. ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಸರ್ಕಾರದ ಪ್ರಕರಣದಲ್ಲಿ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ೨೦೦೪ ರಲ್ಲಿ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

RELATED ARTICLES
- Advertisment -
Google search engine

Most Popular