ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಮಂಡ್ಯ ಯೂತ್ ಗ್ರೂಪ್ಸ್ ಕಾರ್ಯಕರ್ತರಿಂದ ಕಾವೇರಿಗಾಗಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಪಂಜಿನ ಮೆರವಣಿಗೆ ಮೂಲಕ ಸುಪ್ರೀಂ ಆದೇಶದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಮಂಡ್ಯ ಯೂತ್ ಗ್ರೂಪ್ಸ್ ಅಧ್ಯಕ್ಷ ಡಾ.ಅನಿಲ್ ಆನಂದ್ ನೇತೃತ್ವದಲ್ಲಿ ಮಹಾವೀರ ವೃತ್ತದಿಂದ ಆರಂಭವಾದ ಪಂಜಿನ ಮೆರವಣಿಗೆ ನಗರದ ವಿವಿಧ ರಸ್ತೆಗಳಲ್ಲಿ ಸಾಗಿತು.