ಬೆಂಗಳೂರು : ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಸಿಐಡಿಗೆ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ಪ್ರಕರಣ ಗಂಭೀರವಾಗಿದ್ದು, ದೂರು ದಾಖಲಾದ ಬಳಿಕ ಸೂರಜ್ ರೇವಣ್ಣರನ್ನು ಬಂಧಿಸಲಾಗಿದೆ. ರಿಟರ್ನ್ ದೂರು ನೀಡಿದ ಬಗ್ಗೆಯೂ ತನಿಖೆ ಆಗಲಿದೆ, ಕಾನೂನಿನ ಪ್ರಕಾರ ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಕರಣವನ್ನು ಸಿಐಡಿಗೆ ನೀಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಹಾಸನದ ಸೆನ್ ಠಾಣೆಯ ಪೊಲೀಸರು ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ.
ಸೂರಜ್ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. ೧೬ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.