ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜುಲೈ.೧೮ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಲ್ಲದೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ.
ಇಂದು ಬುಧವಾರ ಪ್ರಕರಣ ಸಂಬಂಧ ಬೆಂಗಳೂರಿನ ೪೨ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು. ಅವರ ನ್ಯಾಯಾಂಗ ಬಂಧನವನ್ನು ಜುಲೈ.೧೮ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಅಂದಹಾಗೇ ಜೂನ್.೨೨, ೨೦೨೪ರಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದೂರು ನೀಡಿದ್ದನು. ಆ ಬಳಿಕ ಜೂನ್.೨೩ರಂದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು.