Monday, March 2, 2026
Google search engine

Homeರಾಜ್ಯಸುದ್ದಿಜಾಲಮಾರ್ಚ್ 8 ರಂದು ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಮ್ಯಾರಾಥಾನ್ - ಪಿ. ರವಿಕುಮಾರ್

ಮಾರ್ಚ್ 8 ರಂದು ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಮ್ಯಾರಾಥಾನ್ – ಪಿ. ರವಿಕುಮಾರ್

ಮಂಡ್ಯ: ಸ್ವಚ್ಛ ಭಾರತ್ ಮಿಷನ್  ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ಮಾರ್ಚ್ 8 ರಂದು ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ವಿಧಾನಸಭಾ ಶಾಸಕರಾದ ರವಿಕುಮಾರ್ ತಿಳಿಸಿದರು.

ಅವರು ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ “ನಮ್ಮ ನಡೆ ಸ್ವಚ್ಛತೆಯ ಕಡೆ-  ರನ್ ಫಾರ್ ಮಂಡ್ಯ” ಘೋಷವಾಕ್ಯದೊಂದಿಂಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾರ್ಚ್ 8 ರಂದು ಬೆಳಿಗ್ಗೆ 6 ಗಂಟೆಗೆ ನಗರದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 25 ಸಾವಿರ ಜನರು ಭಾಗವಹಿಸುವಂತೆ  ಈ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಮಾರ್ಚ್ 8 ರಂದು ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಬೇಕು. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಮಾರ್ಚ್ 8 ರಂದು ನಡೆಯುವ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಹೊರಗಿನಿಂದ ಭಾಗವಹಿಸಲು ಅನುಕೂಲವಾಗುವಂತೆ ಆನ್ ಲೈನ್ ನೊಂದಣಿ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ನೌಕರರು ಎನ್‌.ಜಿ.ಓಗಳು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂಬಂಧ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular