ಧಾರವಾಡ : ರಾಜ್ಯದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕಾಂಶ ಕರ್ನಾಟಕ ಕಾರ್ಯಕ್ರಮದ ಮೂಲಕ ಮಕ್ಕಳು ಮತ್ತು ಗರ್ಭಿಣಿಯರು ರಕ್ತಹೀನತೆಯಿಂದ ಬಳಲುತ್ತಿರುವುದನ್ನು ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ್ ಟಿ. ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಜೆಎಸ್ ಎಸ್ ಹುಕ್ಕೇರಿಕಾರ ಅವರು ಪಿಯುಸಿ ಕಾಲೇಜು ಸಹಯೋಗದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕಾಂಶ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ರಕ್ತಹೀನತೆ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ನವೆಂಬರ್ ೨೨, ೨೦೨೩ ರಿಂದ ಆಯೋಜಿಸಲಾಗಿದೆ ಉತ್ತಮ ಆಹಾರ ಸೇವಿಸಿ ಮತ್ತು ರಕ್ತಹೀನತೆಯಿಂದ ದೂರವಿರಿ.
ರಕ್ತಹೀನತೆ ಹೆಚ್ಚಾದಂತೆ ಮಕ್ಕಳು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಸರಕಾರ ಪರೀಕ್ಷೆ-ಚಿಕಿತ್ಸೆ ಉಚಿತ, ರಕ್ತಹೀನತೆ ಮುಕ್ತ ಖಾತ್ರಿ ಎಂಬ ಘೋಷಣೆಯೊಂದಿಗೆ ರಕ್ತಹೀನತೆ ಮುಕ್ತ ಪೌಷ್ಟಿಕಾಂಶ ಕರ್ನಾಟಕ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಗರ್ಭಿಣಿಯರು ಆರೋಗ್ಯ ತಪಾಸಣೆ ಮತ್ತು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಸರ್ಕಾರಿ, ಅನುದಾನಿತ ಪಿಯು ಕಾಲೇಜುಗಳಲ್ಲಿ ಹೆಚ್. ಬಿ ಮಟ್ಟದ ಪರೀಕ್ಷೆ ನಡೆಯಲಿದೆ. ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರ ಸದುಪಯೋಗ ಪಡೆದು ಉಚಿತ ಪರೀಕ್ಷೆ ಮಾಡಿಸಿ ಅಗತ್ಯವಿದ್ದಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಶಿ ಪಾಟೀಲ ಮಾತನಾಡಿ, ಸದೃಢ ಭಾರತ ನಿರ್ಮಾಣದಲ್ಲಿ ರಕ್ತಹೀನತೆ ಮುಕ್ತ ಪೌಷ್ಟಿಕಾಂಶ ಕರ್ನಾಟಕ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ. ಸರಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಮತ್ತು ಅನುದಾನಿತ ಶಾಲೆ, ಪಿಯು ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಎಚ್. ಬಿ.ಲೆವೆಲ್ ಪರೀಕ್ಷೆ ನಡೆಯಲಿದೆ. ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದರೆ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಜೆ. ಎಸ್.ಎಸ್.ಹುಕ್ಕೇರಿಕರ ಪ.ಯು ಕಾಲೇಜು ಪ್ರಾಂಶುಪಾಲೆ ಭಾರತಿ ಶಾನಭಾಗ, ತಾಲೂಕಾ ಆರೋಗ್ಯಾಧಿಕಾರಿ ಡಾ.ತನುಜಾ ಕೆ.ಡಾ.ಡಾ.ಎನ್.ಮದರಮಡ್ಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರುಣ ಅಸ್ಪೀಕರ್ ಉಪಸ್ಥಿತರಿದ್ದರು.
ಕವಿತಾ ಗಾರ್ಗಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆರ್.ಬಿ.ಎಸ್.ಕೆ ತಂಡದ ಸದಸ್ಯರು ಉಪಸ್ಥಿತರಿದ್ದರು.