ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಇಂದು ಏ. ೧೯ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗೆ ಸ್ವೀಪ್ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅನಿತಾ ಎನ್.ಪಿ ಅವರು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಯೋಜನಾ ನಿರ್ದೇಶಕರಾದ ಮಂಜುನಾಥ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಬಿ. ಬಸವರಾಜು, ಗಾಯಿತ್ರಿ ದೇವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.