ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹೆಸರು ಹೇಳಿ ಎಂದು ಒತ್ತಡ ಹಾಕಲಾಗುತ್ತಿದೆ. ಹಣ ಬಳ್ಳಾರಿ ಚುನಾವಣೆಗೆ ಬಳಕೆಯಾಗಿದೆ ಅಂತಾ ಹೇಳಲು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.
ಬೋವಿ ನಿಗಮದಲ್ಲಿ ೧೨೦ ಕೋಟಿ ಹಗರಣ ಆಗಿದೆ. ಅದರ ಬಗ್ಗೆ ಇ.ಡಿ ಯಾಕೆ ಕಾಳಜಿ ವಹಿಸಿಲ್ಲ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣದಲ್ಲಿ ಇ.ಡಿ ಯಾಕೆ ಗಮನ ಹರಿಸಿಲ್ಲ. ಕೆಐಎಡಿಬಿ ದುಡ್ಡು ಸೇಲಂಗೆ ಹೋಗಿದೆ. ಇದರ ಬಗ್ಗೆ ಯಾಕೆ ಇ.ಡಿ ಆಸಕ್ತಿ ವಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.