Friday, December 26, 2025
Google search engine

Homeರಾಜಕೀಯಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ...

ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ

ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ  ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗಗೂ ಕೇಂದ್ರ ಸರಕಾರದ ಜ್ಯಾರಿಗೆ ತಂಡ ನೂತನ ಕಾರ್ಮಿಕ ಸಂಹಿತೆ ಮೊದಲಾದ ಅಂಶಗಳನ್ನು ಪರಿಗಣಿಸಿ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿರುವುದು ಗಮನಾರ್ಹ.                                                     ಅವರು ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ಸರಕಾರದ ನಾರು ಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ

RELATED ARTICLES
- Advertisment -
Google search engine

Most Popular