ಮೈಸೂರು : ನಗದರ ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ ಶವವಾಗಿ ಪತ್ತೆ ಆಗಿರುವಂತಹ ಘಟನೆ ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್‌ನಲ್ಲಿ ನಡೆದಿದೆ. ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
RFO ಕಾಂತರಾಜ್ ಚೌಹಾಣ್ ಅವರು 15 ದಿನದ ಹಿಂದೆಯಷ್ಟೇ ನರಸೀಪುರಕ್ಕೆ ವರ್ಗವಾಗಿದ್ದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಸ್ನೇಹಿತ ಮಲ್ಲನಗೌಡ ಪಾಟೀಲ್ ಜೊತೆಗೆ ನಿನ್ನೆ ಮಧ್ಯಾಹ್ನ ಮಲ್ಲನಗೌಡ ರೂಮ್ ಬುಕ್ ಮಾಡಿದ್ದರು. ಆದರೆ ಏಕಾಏಕಿ ಮೃತಪಟ್ಟಿದ್ದಾರೆ. ಯುವರಾಜ್ ಗೆಲಾಕ್ಸಿ ಹೋಟೆಲ್ ಸಮೀಪದ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ನಲ್ಲಿ ಕಾಂತರಾಜ್ ಚೌಹಾಣ್ ಶವ ಬಿದ್ದಿತ್ತು. ಇನ್ನು ಇತ್ತ ಕಾಂತರಾಜ್ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿದ್ದಾರೆ.



