ಮಂಡ್ಯ: ಭ್ರಷ್ಟಾಚಾರ ನಡೆಸುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೆ ತರುವ ಪ್ರಯತ್ನದಲ್ಲಿದ್ದಾರೆ. ಅದರ ಜೊತೆಗೆ ಎಪಿಎಂಸಿ ಕಾಯ್ದೆ ವಾಪಸ್ ಪಡೆಯಬೇಕು. ಭೂಸುಧಾರಣಾ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಪಡಿತರ ಅಕ್ಕಿಗೆ ಕೇಂದ್ರ ನಿರಾಕರಿಸಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಭತ್ತ, ರಾಗಿ, ಜೋಳ ಬೆಳೆಯುವ ರೈತರಿದ್ದಾರೆ. ರೈತರ ಬಳಿ ನೇರವಾಗಿ ಖರೀದಿ ಮಾಡಬೇಕು.ದಲ್ಲಾಳಿಗಳ ಹಾವಳಿ ತಪ್ಪಿಸಬೇಕು. ಬರ ಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ. ತಕ್ಷಣವೇ ಘೋಷಣೆ ಮಾಡಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಭ್ರಷ್ಟಾಚಾರ ಹೆಚ್ಚಾಗಿದೆ ತಕ್ಷಣವೇ ಇದರ ಬಗ್ಗೆ ಕ್ರಮ ವಹಿಸಬೇಕು.ಲೋಕಾಯುಕ್ತಕ್ಕೆ ಸಿಕ್ಕ ಅಧಿಕಾರಿಗಳನ್ನೆ ಮತ್ತೆ ಸರ್ಕಾರಿ ಕಚೇರಿಗೆ ಹಾಕ್ತಾರೆ. ಹಾಗಾಗಬಾರದು ಎಂದು ತಿಳಿಸಿದರು. .
ಸಿದ್ದರಾಮಯ್ಯ ಮೇಲೆ ನಿರೀಕ್ಷೆ ಇಟ್ಟಿದ್ದೇವೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.