ರಾಮನಗರ: ಹಿಂದುಗಳಿದ ವರ್ಗಗಳ ಅಲೆಮಾರಿ-ಅರೆಅಲೆಮಾರಿ ಸಮುದಾಯದಅಭಿವೃದ್ಧಿಗೆಅಧಿಕಾರಿಗಳು ಶ್ರಮಿಸುವಂತೆಜಿಲ್ಲಾಧಿಕಾರಿಡಾ.ಅವಿನಾಶ್ ಮೆನನ್‌ರಾಜೇಂದ್ರನ್‌ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಆಯೋಜಿಸಲಾಗಿದ್ದಹಿಂದುಳಿದ ವರ್ಗಗಳ ಅಲೆಮಾರಿ-ಅರೆಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದುಳಿದ ವರ್ಗಗಳ ಅಲೆಮಾರಿ-ಅರೆಅಲೆಮಾರಿಜನಾಂಗಕ್ಕೆವಸತಿ, ಶಿಕ್ಷಣ, ನಿವೇಶನ, ವಿದ್ಯಾರ್ಥಿ ನಿಲಯಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಕಠಿಣ ಶ್ರಮವಹಿಸುವಂತೆ ತಿಳಿಸಿದರು.
ಐಜೂರುಗುಡ್ಡದ ನಿವಾಸಿಗಳಿಗೆ ಮೂಲಭೂತ ಸೌಕರ್ಯಕಲ್ಪಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿರುವಅಲೆಮಾರಿ/ಅರೆಅಲೆಮಾರಿಜನಾಂಗದವರನ್ನು ಗುರುತಿಸಿ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ನೀಡುವಂತೆಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ದಿಗ್ವಿಜಯ್ ಬೋಡ್ಕೆ, ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ಜಿಲ್ಲಾ ಅಧಿಕಾರಿ ಮೋಹನ್‌ಕುಮಾರ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ್, ಹೆಚ್ಚುವರಿಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ನಾರಾಯಣ್, ಅಲೆಮಾರಿ-ಅರೆಅಲೆಮಾರಿ ಬುಡಕಟ್ಟು ಸಮುದಾಯದ ಮುಖಂಡರುಗಳಾದ ರಂಗಪ್ಪ,ಬಿ. ರಂಗನಾಥಪ್ಪ,ಮಾರಪ್ಪ ಉಪಸ್ಥಿತರಿದ್ದರು.