Friday, April 18, 2025
Google search engine

Homeಆರೋಗ್ಯಮಕ್ಕಳು ಹಾಗೂ ಗರ್ಭಿಣಿಯರು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ವಹಿಸಿ: ಇಕ್ಬಾಲ್ ಹುಸೇನ್

ಮಕ್ಕಳು ಹಾಗೂ ಗರ್ಭಿಣಿಯರು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ವಹಿಸಿ: ಇಕ್ಬಾಲ್ ಹುಸೇನ್

ರಾಮನಗರ: ಆರೋಗ್ಯವೇ ಭಾಗ್ಯ, ಗರ್ಭಿಣಿಯರು ಹಾಗೂ ಮಕ್ಕಳು ಲಸಿಕೆಯಿಂದ ವಂಚಿತರಾಗದೇ ಆರೋಗ್ಯ ಇಲಾಖೆ ವತಿಯಿಂದ ನೀಡುವ ಎಲ್ಲಾ ಲಸಿಕೆಗಳನ್ನು ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್ ಅವರು ತಿಳಿಸಿದರು.
ಅವರು ಇಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ವಿವಿಧ ಅಭಿವೃದ್ಧಿ ಇಲಾಖೆಗಳು ಹಾಗೂ ಸಂಘ-ಸoಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ ೫.೦ ಕಾರ್ಯಕ್ರಮವಾಗಿದ್ದು, ಮಕ್ಕಳಿಗೆ ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಮಗು ಜನಿಸಿದ ತಕ್ಷಣ ಲಸಿಕೆಗಳನ್ನು ನಿಯಮಾನುಸಾರ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಮಕ್ಕಳನ್ನು ಮಾರಕರೋಗಗಳಿಂದ ರಕ್ಷಿಸುವ ಉದ್ದೇಶದಿಂದ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ ೫.೦ ಕಾರ್ಯಕ್ರಮದಡಿಯಲ್ಲಿ ೩ ಸುತ್ತುಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಗರ್ಭಿಣಿಯರು, ತಾಯಂದಿರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸುವ ಮೂಲಕ ನಿಮ್ಮ ಮಕ್ಕಳನ್ನು ಸದೃಢರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದ್ದು, ಇಲಾಖೆಯೊಂದಿಗೆ ಸಹಕರಿಸಿ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ. ಕಾಂತರಾಜುಅವರು ಮಾತನಾಡಿ, ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಕಾರ್ಯಕ್ರಮವನ್ನು ೨೦೨೩ನೇ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ನಿರ್ದಿಷ್ಟ ೬ ದಿನಗಳಂದು ೩ ಸುತ್ತುಗಳಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಸುತ್ತು ಆಗಸ್ಟ್ ೭ ರಿಂದ ೧೨ರ ವರೆಗೆ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ ೯ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಎಲ್ಲಾ ಅರ್ಹ ಫಲಾನುಭಿವಗಳು ತಪ್ಪದೇ ಲಸಿಕೆಯನ್ನು ಪಡೆಯುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ೦ ರಿಂದ ೨ ವರ್ಷದೊಳಗಿನ ೧೬೨೮ ಮಕ್ಕಳು, ೨ ರಿಂದ ೫ ವರ್ಷದೊಳಗಿನ ೭೯ ಮಕ್ಕಳು ಹಾಗೂ ೩೭೩ ಜನ ಗರ್ಭಿಣಿ ಮಹಿಳೆಯರು ಲಸಿಕೆಯಿಂದ ವಂಚಿತರಾಗಿದ್ದು, ಅವರೆಲ್ಲರೂ ಸಹ ಲಸಿಕೆಗಳನ್ನು ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ೦ ರಿಂದ ೨ ವರ್ಷದೊಳಗಿನ ಮಕ್ಕಳಿಗೆ ಶಾಸಕರಾದ ಇಕ್ಬಾಲ್ ಹುಸೇನ್ ಅವರು ಲಸಿಕೆ ನೀಡಿದರು ಹಾಗೂ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ೫.೦ ಅಭಿಯಾನದಡಿ ಲಸಿಕೆ ಪಡೆದ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷರಾದ ಸೋಮಶೇಖರ್ (ಮಣಿ), ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ. ಪದ್ಮಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ರಾಜು, ಡಿ.ಇ.ಒ ಡಾ. ಮಂಜುನಾಥ್, ಡಿ.ಟಿ.ಓ ಡಾ. ಕುಮಾರ್, ಟಿ.ಹೆಚ್.ಓ ಡಾ. ಶಶಿಕಲಾ, ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್, ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular