Saturday, April 12, 2025
Google search engine

Homeರಾಜ್ಯಸುದ್ದಿಜಾಲಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಿತರಾಗಿ: ಶಾಸಕ ಡಿ.ರವಿಶಂಕರ್ ಸಲಹೆ

ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಿತರಾಗಿ: ಶಾಸಕ ಡಿ.ರವಿಶಂಕರ್ ಸಲಹೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಶಿಕ್ಷಣದಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು ಮತ್ತು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು
ಅವುಗಳನ್ನು ಸದ್ಬಳಕೆ ಮಾಡಿಕೊಂಡು ಎಲ್ಲರೂ ಶಿಕ್ಷಿತರಾಗಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಕೆ.ಆರ್.ನಗರ ಪಟ್ಟಣದ ಹೊರ ವಲಯದಲ್ಲಿರುವ ಕಾಳೇನಹಳ್ಳಿ ಆದರ್ಶ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಶಾಲೆಯ ಕಂಪ್ಯೂಟರ್ ಕೊಠಡಿ ಉದ್ಘಾಟನೆ, ಸಂಚಿಕೆ ಬಿಡುಗಡೆ
ಮತ್ತು ಎಸ್‌ಡಿಎಂಸಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜತೆಗೆ ಮೂಲಭೂತ ಸೌಕರ್ಯ ಒದಗಿಸುವ ಸಲುವಾಗಿ ಶೂ ಭಾಗ್ಯ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದ್ದು ಅವುಗಳನ್ನು ಶಾಲೆಯ ಆಡಳಿತ ಮಂಡಳಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಈ ಬಾರಿ ಆದರ್ಶ ವಿದ್ಯಾಲಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ.೧೦೦ರಷ್ಟು ಪ್ರಗತಿ ಸಾಧಿಸಿರುವುದು
ಹೆಮ್ಮೆಯ ವಿಚಾರ ಎಂದು ಹೇಳಿದ ಶಾಸಕ ಡಿ.ರವಿಶಂಕರ್ ಮಕ್ಕಳು ಅಂಕ ಗಳಿಸುವುದರ ಜತೆಗೆ ಇತರ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲೂ ಪಾಲ್ಗೊಂಡು ಸಾಧನೆ ಮಾಡುವಂತೆ ಶಾಲೆಯ ಶಿಕ್ಷಕರು ಮತ್ತು
ಸಿಬ್ಬಂದಿಗಳು ತಯಾರು ಮಾಡಬೇಕು ಎಂದು ಸೂಚಿಸಿದರು.

ಆದರ್ಶ ಶಾಲೆಯ ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಸೌಕರ್ಯ ಕಲ್ಪಿಸಲು ಬದ್ದನಾಗಿದ್ದು ಮಕ್ಕಳ ಸೈಕಲ್ ನಿಲುಗಡೆಗಾಗಿ ಸ್ಟಾö್ಯಂಡ್ ನಿರ್ಮಾಣ ಮತ್ತು ಮಧ್ಯಾಹ್ನದ ಭೋಜನ ಸವಿಯಲು ಊಟದ ಹಾಲ್ ಸೇರಿದಂತೆ ಇತರ ಮೂಲಭೂತ ಸೌಕರ್ಯ ಒದಗಿಸಲು ೫ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಆಗ್ಗಂದ್ದಾಗೆ ಶಾಲೆಗೆ ಭೇಟಿ ನೀಡಿ ಬೇಕಾಗಿರುವ ಸವಲತ್ತುಗಳನ್ನು ಒದಗಿಸಬೇಕು ಎಂದು ಸೂಚಿಸಿದ ಶಾಸಕರು ಶಾಲೆಗೆ ಶುದ್ದ ಕುಡಿಯುವ ನೀರಿನ
ಘಟಕವನ್ನು ಎಸ್‌ಡಿಎಂಸಿ ವತಿಯಿಂದ ಅಳವಡಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿತ್ತಲ್ಲದೆ ಶಾಲೆಯ ಸಂಚಿಕೆ ಬಿಡುಗಡೆ ಮಾಡಲಾಯಿತು. ಬಿಇಒ ಆರ್.ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕಿ ರುಕ್ಮಿಣಿ, ಶಿಕ್ಷಕಿ ರಶ್ಮಿ
ಎಸ್‌ಡಿಎಂಸಿ ಅಧ್ಯಕ್ಷ ಕೆ.ಪಿ.ಜಗದೀಶ್, ಉಪಾಧ್ಯಕ್ಷೆ ಶೈಲಾಮಧುಚಂದ್ರ, ಮಾಜಿ ಅಧ್ಯಕ್ಷ ಧರ್ಮವೀರನ್, ಸದಸ್ಯರಾದ ಕೆ.ಚಂದ್ರು, ಚೆಲುವರಾಜು, ದೊಡ್ಡಕೊಪ್ಪಲುರವಿ, ಉದಯಶಂಕರ್, ಪುರಸಭೆ ಸದಸ್ಯರಾದ
ಕೋಳಿಪ್ರಕಾಶ್, ನಟರಾಜು, ಶಂಕರ್, ಸೈಯದ್‌ಸಿದ್ದಿಕ್, ಮಾಜಿ ಸದಸ್ಯ ಕೆ.ವಿನಯ್, ನಗರ ಯೋಜನಾ
ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ನಿರ್ದೇಶಕರಾದ ಸೈಯದ್‌ಜಾಬೀರ್, ಸರಿತಾಜವರಪ್ಪ, ದೊಡ್ಡೇಕೊಪ್ಪಲು ಗ್ರಾ.ಪಂ.ಅಧ್ಯಕ್ಷೆ ಶ್ವೇತಾರವಿ, ಸದಸ್ಯೆ ರಾಜೇಶ್ವರಿಬಲರಾಮು, ಅಡಗೂರು ಗ್ರಾ.ಪಂ. ಅಧ್ಯಕ್ಷ ಮಹದೇವ್, ಕಾಂಗ್ರೆಸ್ ನಗರಾಧ್ಯಕ್ಷ ಎಂ.ಜೆ.ರಮೇಶ್ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular