Friday, April 18, 2025
Google search engine

Homeರಾಜ್ಯಸುದ್ದಿಜಾಲರಾಜ್ಯ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಶಾಸಕ ಡಿ.ರವಿಶಂಕರ್

ರಾಜ್ಯ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಶಾಸಕ ಡಿ.ರವಿಶಂಕರ್

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಮಹಿಳೆಯರು ಮತ್ತು ಮಕ್ಕಳಲ್ಲಿ ದಿನೇ ದಿನೇ ರಕ್ತ ಹೀನತೆಯ ಪ್ರಮಾಣ ಅಧಿಕವಾಗುತ್ತಿರುವ ಪರಿಣಾಮ ಇದನ್ನು ನಿವಾರಿಸಲು ರಾಜ್ಯ ಸರ್ಕಾರ ಪೋಷಣ್ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸರ್ವರೂ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಕೆ.ಆರ್.ನಗರ ಇವರ ವತಿಯಿಂದ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸದರಿ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುತ್ತಿದ್ದು ಸೆ.೩ ರಿಂದ ೩೦ರವರೆಗೆ ಯೋಜನೆಯಡಿ ಆಹಾರ ಕೊಡಲಾಗುತ್ತದೆ ಆದ್ದರಿಂದ ಅಗತ್ಯ ಉಳ್ಳವರು ಇದರ ಸದುಪಯೋಗ ಪಡಿಸಿಕೊಳ್ಳಲು ಸಂಬoಧಿತ ಇಲಾಖೆಯ ಅಧಿಕಾರಿಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ
ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ೬ ತಿಂಗಳಿನಿoದ ೬ ವರ್ಷದ ಮಕ್ಕಳಿಗೆ ಅಪೌಷ್ಠಿಕತೆ ಕಾಡುತ್ತಿದ್ದು ಇದನ್ನು ನೀಗಲು ಸರ್ಕಾರ ಗಂಭೀರ ಕ್ರಮ ಕೈಗೊಂಡಿದ್ದು ಅಂಗನವಾಡಿ ಸಹಾಯಕಿಯರ ಮೂಲಕ ಸೂಕ್ತ ಚಿಕಿತ್ಸೆ ಮತ್ತು ಮಾರ್ಗದರ್ಶನ ನೀಡುತ್ತಿದ್ದು ಇದರ ಯಶಸ್ಸಿಗೆ ಸರ್ವರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು ವ್ಯಾಪ್ತಿಯಲ್ಲಿ ೩೦೦ ಅಂಗನವಾಡಿ ಕೇಂದ್ರಗಳಿದ್ದು ಸ್ವಂತ ಕಟ್ಟಡ ಇಲ್ಲದ ಕೇಂದ್ರಗಳಿಗೆ ಆದ್ಯತೆಯ ಮೇರೆಗೆ ಅನುದಾನ ನೀಡಿ ಕಟ್ಟಡ ನಿರ್ಮಾಣ ಮಾಡಿಸಿಕೊಡುವ ಭರವಸೆ ನೀಡಿದ ಶಾಸಕರು ಪಟ್ಟಣದಲ್ಲಿ ೯ ಅಂಗನವಾಡಿ ಕಟ್ಟಡಗಳಿದ್ದು ಆ ಪೈಕಿ ಕೇಂದ್ರಗಳಿಗೆ ಸ್ವಂತ ಕೊಠಡಿ ಇದ್ದು ೩ ಹೊಸ ಕೇಂದ್ರಗಳ ನಿರ್ಮಾಣಕ್ಕೆ ಈಗಾಗಲೇ ಅನುದಾನ ನೀಡಿದ್ದು ಉಳಿದ ೪ ಕೊಠಡಿಗಳನ್ನು ನಿರ್ಮಿಸಲು
ಕ್ರಮ ಕೈಗೊಳ್ಳುವುದಾಗಿ ನುಡಿದರು.

ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಾಲ್ಯ ವಿವಾಹಗಳ ಸಂಖ್ಯೆ ಅಧಿಕವಾಗುತ್ತಿದ್ದು ಇದನ್ನು ತಡೆಗಟ್ಟಲು ಅಧಿಕಾರಿಗಳ ಜತೆಗೆ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅಂಗನವಾಡಿ ಸಹಾಯಕರಿಗೆ ಸಹಕಾರ ನೀಡಬೇಕೆಂದು ಕೋರಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಜಿ.ಪಂ. ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಶಂಕರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಪುರಸಭೆ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್ ಸೇರಿದಂತೆ
ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular