ಕಿತ್ತೂರು: ಮಳೆಗಾಲ ಆರಂಭವಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಗ್ರಾಮಗಳಲ್ಲಿ ಚರಂಡಿ ನೀರು ಹರಿದು ಹೋಗದಂತೆ ಮುಂಜಾಗ್ರತಾ ಕ್ರಮವಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೀರಿನ ತೊಟ್ಟಿಗಳನ್ನು ಆಗಾಗ ಶುಚಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದರು.
ಚನ್ನಮ್ಮ ಕಿತ್ತೂರು ತಾಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಮನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶಾಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ನಾನಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿಗಳ ಆಸ್ತಿ ಸಮೀಕ್ಷೆ, ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಶೌಚಾಲಯ ಹಾಗೂ ಎಂ ಘಟಕಗಳ ಕಾಮಗಾರಿಗಳನ್ನು ವಾರದೊಳಗೆ ಪೂರ್ಣಗೊಳಿಸುವಂತೆ ಎಸ್.ಡಬ್ಲ್ಯು ಸೂಚಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಭೀಮಪ್ಪ ತಳವಾರ, ಸಹಾಯಕ ನಿರ್ದೇಶಕ ಪಂಚಾಯಿತಿ. ರಾ.ಸುರೇಶ ನಾಗೋಜಿ, ಸಹಾಯಕ ನಿರ್ದೇಶಕ ಗ್ರಾ.ಲಿಂಗರಾಜ ಹಾಲಕರ್ಣಿಮಠ, ತಾಲೂಕು ಮಟ್ಟದ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
