Thursday, April 17, 2025
Google search engine

Homeರಾಜ್ಯವಿಧಾನ ಪರಿಷತ್’ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್’ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನಸ್ವೀಕರಿಸಿದ ನಂತರ ನೂತನ ಶಾಸಕರುಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಸಭಾಪತಿಗಳು ನೂತನ ಶಾಸಕತ್ರಯರಿಗೆ ಸದನದ ನಿಯಮಾವಳಿಗಳು ಒಳಗೊಂಡ ಕಿಟ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ,ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಶಾಸಕರುಗಳು ಇದ್ದರು.

RELATED ARTICLES
- Advertisment -
Google search engine

Most Popular