ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ : ಅಮೋಘ ವರ್ಷ ಅಮೃತ ವರ್ಷಿಣಿ ಸೇವಾಪ್ರತಿಷ್ಠಾನದ ವತಿಯಿಂದ 6ನೇ ವರ್ಷದ ಸಂಸ್ಮರಣೆಯ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಬೆಟ್ಟದಪುರದಲ್ಲಿ ನಾಳೆ (ಜುಲೈ 12 ) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಧ್ಯಕ್ಷ ಗೊರಳ್ಳಿ ಜಗದೀಶ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಕನ್ನಡ ಭಾಷಾ ವಿಷಯದಲ್ಲಿ 125ಅಂಕ ಗಳನ್ನು ಪಡೆದ ತಾಲೂಕಿನ ಖಾಸಗಿ, ಸರ್ಕಾರಿ ಶಾಲೆಯ ಸುಮಾರು 40ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅತಿಹೆಚ್ಚು ಅಂಕ ಪಡೆದ ಮಕ್ಕಳಿಗೆ ಪುರಸ್ಕಾರ, ವಿಶೇಷ ಚೇತನ ವಿದ್ಯಾರ್ಥಿ ಅನುಶ್ರೀ ಗೆ ಪೀಠೋಪಕರಣ ವಿತರಣೆ, ಹಾಸನದ ಹಾಸನಾಂಬ ಮಲ್ಟಿ ಸ್ಪೇಷಲಿಟಿ ಆಸ್ಪತ್ರೆಯ ವ್ಯೆದ್ಯಕೀಯ ನಿರ್ದೇಶಕ ಡಾ. ಬಸವರಾಜು, ಹಾಗೂ ಮಹಾರಾಜಾ ಕಾಲೇಜು ಮೈಸೂರಿನ ಜಾನಪದ ವಿಭಾಗದ ವಿಜಯ ಲಕ್ಷ್ಮಿ ಮ. ನಾ ಪುರ ಅವರನ್ನು ಅಮೋಘ ವರ್ಷ ಅಮೃತ ವರ್ಷಿಣಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕುಂಜಿ ಅಹಮದ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ವೈ ಡಿ ರಾಜಣ್ಣ, ಚಂದ್ರ ಶೇಖರ್, ಕಾರ್ಯ ನಿರ್ವಹಣಾ ಅಧಿಕಾರಿ ಸುನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು,ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮ ದಲ್ಲಿ ಭಾಗವಹಿಸುತ್ತಿದ್ದಾರೆ.