Sunday, April 19, 2026
Google search engine

Homeರಾಜ್ಯಆರೋಗ್ಯ ಸಚಿವರೊಂದಿಗೆ ಮಾತುಕತೆ ವಿಫಲ: ಮಾ.11 ರಂದು ರಾಜ್ಯಾದ್ಯಂತ ವೈದ್ಯರ ಮುಷ್ಕರ

ಆರೋಗ್ಯ ಸಚಿವರೊಂದಿಗೆ ಮಾತುಕತೆ ವಿಫಲ: ಮಾ.11 ರಂದು ರಾಜ್ಯಾದ್ಯಂತ ವೈದ್ಯರ ಮುಷ್ಕರ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರಕ್ಕೆ ಮುಂದಾಗಿರುವ ಸರ್ಕಾರಿ ವೈದ್ಯಾಧಿಕಾರಿಗಳು, ತಮ್ಮ ನಿಲುವನ್ನು ಆರೋಗ್ಯ ಸಚಿವರ ಜೊತೆಗಿನ ಮಾತುಕತೆಯ ಬಳಿಕವೂ ಬದಲಿಸಿಲ್ಲ. ಸೋಮವಾರ(ಮಾ.2)ದಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು.

ಆದರೆ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್ 11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ. ಇನ್ನೂ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಈ ಬಗ್ಗೆ ಮಾಹಿತಿ ನೀಡಿದ್ದು, ಸೋಮವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯರು, ನೌಕರರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸುದೀರ್ಘವಾದ ಚರ್ಚೆ ನಡೆಸಲಾಯಿತು.

ಆದರೆ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿಲ್ಲ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ನಮ್ಮ ಸಂಘವು ಈ ಹಿಂದೆ ಕೈಗೊಂಡ ನಿರ್ಣಯದಂತೆ ಮಾರ್ಚ್ 11ರಿಂದ ರಾಜ್ಯಾದ್ಯಂತ ಸರ್ಕಾರಿ ವೈದ್ಯರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ ಎನ್ನಲಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದಾಗಿ ಕರ್ನಾಟಕ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ ಮೇಟಿ ಸ್ಪಷ್ಟ ಪಡಿಸಿದ್ದಾರೆ.

ಈ ಎಲ್ಲದರ ಹಿನ್ನಲೆಯಲ್ಲಿ ಮಾರ್ಚ್ 11ರಿಂದ ರಾಜ್ಯಾದ್ಯಂತ ಸರ್ಕಾರಿ ವೈದ್ಯರು ಮುಷ್ಕರ ನಿರತರಾಗಲಿದ್ದು, ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಓಪಿಡಿ ಸೇವೆಯಲ್ಲಿ ಬಹುತೇಕ ವ್ಯತ್ಯಯ ಉಂಟಾಗಲಿದೆ ಎಂಬುದಾಗಿಯೂ ಆರೋಗ್ಯ ಇಲಾಖೆಯ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ.ಬಿ ಬಳ್ಳಾರಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular