Saturday, April 19, 2025
Google search engine

Homeರಾಜ್ಯಸುದ್ದಿಜಾಲನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಸಕಲ ಸಿದ್ದತೆ ಮಾಡಿಕೊಳ್ಳಿ-ಶಾಸಕ ಡಿ.ರವಿಶಂಕರ್

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಸಕಲ ಸಿದ್ದತೆ ಮಾಡಿಕೊಳ್ಳಿ-ಶಾಸಕ ಡಿ.ರವಿಶಂಕರ್

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂ.೨೭ರಂದು ತಾಲೂಕು ಆಡಳಿತ ಮತ್ತು ತಾಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಅತ್ಯಂತ ವಿಜೃಂಭಣೆಯಿoದ ಸಾಲಿಗ್ರಾಮ ಪಟ್ಟಣದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಕೆ.ಆರ್.ನಗರ ಪಟ್ಟಣದ ಮಿನಿವಿಧಾನ ಸೌಧದ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ತಾಲೂಕು ಆಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಜಯಂತಿಯAದು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದ ಶಾಸಕರು ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸಾಧಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ತಾಲೂಕು ಆಡಳಿತಕ್ಕೆ ಪಟ್ಟಿ ನೀಡಬೇಕೆಂದು ತಿಳಿಸಿದರು.

ಇದೇ ಪ್ರಥಮ ಬಾರಿಗೆ ನೂತನ ತಾಲೂಕು ಸಾಲಿಗ್ರಾಮದಲ್ಲಿ ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಲು ನಿರ್ಧರಿಸಿರುವುದರಿಂದ ಕಾರ್ಯಕ್ರಮಕ್ಕೆ ನಾನು ಎಲ್ಲಾ ರೀತಿಯ ಸಹಕಾರವನ್ನು ನೀಡುವುದರ ಜತೆಗೆ ಇಲಾಖಾ ಅಧಿಕಾರಿಗಳು ಒಂದೊoದು ಜವಾಬ್ದಾರಿಗಳನ್ನು ವಹಿಸಿಕೊಂಡು ಕಾರ್ಯಕ್ರಮದ ಯಶಸ್ವಿಗೆ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದು ಸೂಚಿಸಿದರು.

ಪ್ರತಿ ಜಯಂತಿಯ ಪೂರ್ವಭಾವಿ ಸಭೆಗಳಿಗೆ ಕೆಲವು ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿದ್ದು ಅವರಿಗೆ ತಹಶೀಲ್ದಾರ್ ಕಾರಣ ಕೇಳಿ ನೋಟೀಸ್ ನೀಡಿ ಉತ್ತರ ಪಡೆದು ನನಗೆ ವರದಿ ನೀಡಬೇಕು ಎಂದು ಸೂಚಿಸಿದ ಶಾಸಕ ಡಿ.ರವಿಶಂಕರ್ ಪದೇ ಪದೇ ಗೈರಾಗುತ್ತಿರುವ ಅಧಿಕಾರಿಗಳ ಪಟ್ಟಿಯನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಿರ್ಧಾಕ್ಷಿಣ್ಯ ಕ್ರಮಕ್ಕೆ ಒತ್ತಾಯಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಕೆಲವು ಇಲಾಖೆಯ ಅಧಿಕಾರಿಗಳು ಚುನಾಯಿತ ಸದಸ್ಯರು ಮತ್ತು ಸಾರ್ವಜನಿಕರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಶಾಸಕರು ಕಛೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರನ್ನು ಪದೇ ಪದೇ ಕಛೇರಿಗೆ ಅಲೆದಾಡಿಸದೆ ಅವರ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಡುವಂತೆ ತಾಕೀತು ಮಾಡಿದರು.

ತಹಶೀಲ್ದಾರ್‌ಗಳಾದ ಸಿ.ಎಸ್.ಪೂರ್ಣಿಮ, ಎಸ್.ಎನ್.ನರಗುಂದ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಟಿ.ಅಣ್ಣೇಗೌಡ, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ಸಮಾಜದ ಮುಖಂಡರಾದ ಮಿರ್ಲೆನಂದೀಶ್, ಎಂ.ಬಿ.ಲೋಕನಾಥ್, ಎ.ಎಸ್.ರಾಮಪ್ರಸಾದ್, ಮಂಜು ಮಾತನಾಡಿದರು.

ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭೆ ಸದಸ್ಯ ಕೆ.ಜಿ.ಸುಬ್ರಮಣ್ಯ, ಒಕ್ಕಲಿಗರ ಸಂಘದ ಹಿರಿಯ ಉಪಾಧ್ಯಕ್ಷ ಹೆಚ್.ಪಿ.ಪರಶುರಾಮು, ಯುವ ಮುಖಂಡ ವೈ.ಎಸ್.ಜಯಂತ್, ತಾ.ಪಂ. ಜಿ.ಕೆ.ಹರೀಶ್, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular