ಚಳ್ಳಕೆರೆ: ತಾಲೂಕಿನಲ್ಲಿ ಆಗಸ್ಟ್ 15 ರಂದು ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬಗಳ ಸಮಿತಿಯು ಶಿಸ್ತು ಬದ್ಧವಾಗಿ ಆಯೋಜಿಸಿ ಉತ್ತಮ ರೀತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಶ್ರಮವಹಿಸಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಬೇಕು ಎಂದು ಶಾಸಕ ಟಿ ರಘುಮೂರ್ತಿ ಅಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ಶಾಸಕ ಟಿ ರಘುಮೂರ್ತಿ ಮಾತನಾಡಿ ಪ್ರತಿ ಸೋಮವಾರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ಏರ್ಪಡಿಸಲು ತೀರ್ಮಾನಿಸಲಾಗಿದ್ದು ಶೀಘ್ರವೇ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಅಧಿಕಾರಿಗಳು ಯಾವುದೇ ನೆಪಗಳನ್ನು ಹೇಳದೆ ಇಲಾಖಾವಾರು ಮಾಹಿತಿಗಳನ್ನು ಹೊಂದಿರಬೇಕು ಜನತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತೆ ಟಿ ಲೀಲಾವತಿ ಪಿಎಸ್ಐ ಸತೀಶ್ ನಾಯಕ್ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ರವೀಶ್ ಕುಮಾರ್ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.