ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಎದುರಾದ ಆರೋಗ್ಯ ಸಮಸ್ಯೆ ಏನೆಂಬುದರ ಬಗ್ಗೆ ಇನ್ನಷ್ಟೆ ಖಚಿತ ಮಾಹಿತಿ ತಿಳಿಯಬೇಕಿದೆ.
ಅಜಿತ್ ಆಸ್ಪತ್ರೆಗೆ ದಾಖಲಾಗಿರುವ ವಿಷಯವನ್ನು ಅವರ ಆಪ್ತ ಮೂಲಗಳು ಮಾಧ್ಯಮಗಳಿಗೆ ಖಚಿತಪಡಿಸಿವೆ. ಆದರೆ ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಕೆಲವು ಅಭಿಮಾನಿ ಪೇಜ್ಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ಅಜಿತ್ ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.
ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದು ನಿಜ ಆದರೆ ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಿಬಿಡುವುದು ಬೇಡ, ಆಸ್ಪತ್ರೆಯಿಂದಲೇ ಖಚಿತ ಮಾಹಿತಿ ಹೊರಬೀಳಲಿದೆ ಎಂದು ಅಜಿತ್ರ ಆಪ್ತರು ಮಾಧ್ಯಮಗಳಿಗೆ ತಿಳಿಸಿರುವುದಾಗಿ ತಮಿಳಿನ ಕೆಲ ಮಾಧ್ಯಮಗಳು ವರದಿ ಮಾಡಿವೆ. ಅಜಿತ್, ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿರುವುದು ಅವರ ಅಭಿಮಾನಿಗಳಿಗೆ ಆತಂಕ ತಂದಿದೆ.