Friday, April 18, 2025
Google search engine

HomeUncategorizedರಾಷ್ಟ್ರೀಯತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ: ನಾಲ್ವರ ಸಾವು

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ: ನಾಲ್ವರ ಸಾವು

ತಮಿಳುನಾಡು: ತಮಿಳುನಾಡಿನ ಮೈಲಾಡುತುರೈನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದಲ್ಲಿ ಮೃತಪಟ್ಟವರನ್ನು ಮಾಣಿಕ್ಕಂ, ಮದನ್, ರಾಘವನ್ ಮತ್ತು ನಿಕೇಶ್ ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ದೌಡಾಯಿಸಿದ್ದು, ಅವರು ಇತರ ನಾಲ್ವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಮಯಿಲಾಡುತುರೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗೋಡೌನ್ ಮಾಲೀಕ ಮೋಹನ್ ಎಂದು ಗುರುತಿಸಲಾಗಿದ್ದು, ಪರವಾನಗಿ ಪಡೆದಿದ್ದಾರೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಮೈಲಾಡುತುರೈ ಜಿಲ್ಲಾ ಕಂದಾಯ ಅಧಿಕಾರಿ (ಡಿಆರ್‌ ಒ) ಮಣಿಮೇಕಲೈ, ಆರ್‌ಡಿಒ ಅರ್ಚನಾ ಮತ್ತು ನಾಗಪಟ್ಟಣಂ ಎಸ್‌ ಪಿ ಹರ್ಷ್ ಸಿಂಗ್ ಕೂಡ ಸ್ಥಳಕ್ಕೆ ತಲುಪಿದ್ದಾರೆ.

ಸ್ಫೋಟದ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಮೃತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

RELATED ARTICLES
- Advertisment -
Google search engine

Most Popular