Saturday, April 19, 2025
Google search engine

HomeUncategorizedರಾಷ್ಟ್ರೀಯಟ್ಯಾಂಕರ್ ಟ್ರಕ್ - ಕಾರು ನಡುವೆ ಅಪಘಾತ: ಐವರು ಸಾವು

ಟ್ಯಾಂಕರ್ ಟ್ರಕ್ – ಕಾರು ನಡುವೆ ಅಪಘಾತ: ಐವರು ಸಾವು

ತಮಿಳುನಾಡು: ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.

ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದಾಗ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ನಾಲ್ವರು ಮೃತಪಟ್ಟರೆ ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ.

ಧಾರಾಪುರಂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ . ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.

RELATED ARTICLES
- Advertisment -
Google search engine

Most Popular