Saturday, April 19, 2025
Google search engine

Homeರಾಜ್ಯತಸ್ತಿಕ್‌ ಮೊತ್ತ ಅರ್ಚಕರ ಬ್ಯಾಂಕ್‌ ಖಾತೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಸ್ತಿಕ್‌ ಮೊತ್ತ ಅರ್ಚಕರ ಬ್ಯಾಂಕ್‌ ಖಾತೆಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ಮಂಡಿಸಿದ್ದ 2024-25ನೇ ಸಾಲಿನ ಮುಂಗಡ ಪತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಪತಿ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ. ತಿರುಪತಿಯಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದೆ. ಪ್ರಸಕ್ತ ಸಾಲಿನಲ್ಲಿ ವಾರಾಣಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್‌ ಕಂ ಬ್ಯಾರೇಜ್‌ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ.

ಯಾವುದೇ ಆದಾಯವಿಲ್ಲದ 34,165 ಸಿ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಉಲ್ಲೇಖಿಸಲಾಗಿದೆ.

ಇನಾಂ/ ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ಸಿ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್‌ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು.

RELATED ARTICLES
- Advertisment -
Google search engine

Most Popular