ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ನಲ್ಲಿರುವ ನಂದಿನಿ ಕನ್ನಡ ಯುವಕರ ಸಂಘದ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಪಾಲ್ಗೊಂಡು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೋಪಾಲಯ್ಯ ಅವರು, ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಿ ಇಂದಿಗೆ 50 ವರ್ಷ ಆಯಿತು. ಈ ಶುಭಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ನಾವೆಲ್ಲರೂ ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನು ಪರಿಣಾಮಕಾರಿಯಾಗಿ ಬಳಸಬೇಕು ಹಾಗೂ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಹಾಗೂ ಕನ್ನಡ ಭಾಷೆ ಬರದ ನೆರೆ ಹೊರೆಯ ಸಹೋದರ ಸಹೋದರಿಯರೀಗೆ ಕನ್ನಡವನ್ನು ಹೇಳಿಕೊಡಬೇಕು ಎಂದರು.
ನಾವು ಬೇರೆ ಭಾಷೆಗೆ ಹೊಂದಿಕೊಳ್ಳದೆ ನಮ್ಮದೇ ಸವಿ ನುಡಿ ಕನ್ನಡವನ್ನು ಹೇಳಿಕೊಡಬೇಕು. ಎಲ್ಲರೂ ನವೆಂಬರ್ ತಿಂಗಳಲ್ಲಿ ಮಾತ್ರ ಆಚರಣೆ ಮಾಡದೆ ಪ್ರತಿ ದಿನ ಪ್ರತಿಕ್ಷಣವೂ ನಮ್ಮ ಉಸಿರಾಗಿರಬೇಕು ಎಂದು ಹೇಳಿದರು.
ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳ ಯೋಜನೆಯಾದ ಸ್ವಧ್ವನಿ ಯೋಜನೆಯಲ್ಲಿ ನಿಮಗೆ ಸಹಾಯ ಆಗುವಂತಹ ಯೋಜನೆ ಜಾರಿಗೆ ತಂದಿದ್ದಾರೆ .ಇವುಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು.ಎಲ್ಲರಿಗೂ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಮತ್ತು ಕನ್ನಡ ರಾಜ್ಯೋತ್ಸವ ಶುಭಾಶಯಗಳು ಎಂದು ಹೇಳಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ನಂದಿನಿ ಕನ್ನಡ ಯುವಕರ ಸಂಘದ ಅಧ್ಯಕ್ಷ ರಾದ ರಾಜು ಹಾಗೂ ಕ್ಷೇತ್ರದ ಎಲ್ಲ ಮುಖಂಡರು ಕಾರ್ಯಕರ್ತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.