Friday, February 13, 2026
Google search engine

Homeಅಪರಾಧಟಿಪ್ಪರ್, ಪಿಕಪ್ ನಲ್ಲಿ ಮಕ್ಕಳ ಪ್ರವಾಸ ಕರೆದುಕೊಂಡು ಹೋದ ಟೀಚರ್ ಅಮಾನತು

ಟಿಪ್ಪರ್, ಪಿಕಪ್ ನಲ್ಲಿ ಮಕ್ಕಳ ಪ್ರವಾಸ ಕರೆದುಕೊಂಡು ಹೋದ ಟೀಚರ್ ಅಮಾನತು

ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು KA-21-A-8776 ನಂಬರಿನ ಪಿಕಪ್ ಮತ್ತು KA-70-2596 ನಂಬರಿನ ಟಿಪ್ಪರ್ ವಾಹನದಲ್ಲಿ ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ಬಳಿಕ ವಾಪಸ್ ಶಾಲೆಗೆ ಕರೆದುಕೊಂಡು ಬಂದಿದ್ದಾರೆ.
ಈ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಬಳೆಂಜ ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.
ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳೆಂಜ ಶಾಲೆಗೆ ಫೆ.12 ರಂದು ಭೇಟಿ ನೀಡಿ ವರದಿ ಮಾಡಿಕೊಂಡು ಅ ವರದಿಯನ್ನು ಮಂಗಳೂರು ಡಿಡಿಪಿಐ ಶಿಶಿಧರ್.ಜಿ.ಎಸ್ ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular