Friday, September 5, 2025
Google search engine

Homeರಾಜ್ಯಸುದ್ದಿಜಾಲಶಿಕ್ಷಕರಿಗೆ ಗೌರವದ ದಿನ: ಕೆ.ಆರ್.ನಗರ ಕ್ಷೇತ್ರದ 6 ಮಂದಿ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ

ಶಿಕ್ಷಕರಿಗೆ ಗೌರವದ ದಿನ: ಕೆ.ಆರ್.ನಗರ ಕ್ಷೇತ್ರದ 6 ಮಂದಿ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಮೈಸೂರು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಕೆ.ಆರ್.ನಗರ ಕ್ಷೇತ್ರದ 6 ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕೆ.ಆರ್.ನಗರ ತಾಲೂಕಿನ‌ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ವೀರಭದ್ರಸ್ವಾಮಿ, ಮುದ್ದನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿ.ಎಂ.ಸುಧಾಮಣಿ ಮತ್ತು ಚಾಮಲಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಆರ್.ಮಂಜುಳಾ, ಕೆಸ್ತೂರು ಕೊಪ್ಪಲು ಸರ್ಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗೋವಿಂದರಾಜು ಅವರಿಗೆ ಪ್ರಶಸ್ತಿ ದೊರೆತ್ತಿದೆ.

ಇನ್ನು ಸಾಲಿಗ್ರಾಮ ತಾಲೂಕಿನ ಸಾಲೇಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎ.ಜಿ.ಪ್ರಭಾಕರ್, ಸಾಲಿಗ್ರಾಮ ಸರ್ಕಾರಿ ಪ್ರೌಡಶಾಲೆಯ ಶಿಕ್ಷಕ ಅಂಕನಹಳ್ಳಿ ಮಧುಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಇವರಿಗೆ ಸೆ. 6 ರಂದು ಮೈಸೂರಿನ ಕಲಾಮಂದಿರದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಇವರಿಗೆ ಪ್ರಶಸ್ತಿ ಬಂದಿರುವ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಲಕ್ಕಿಕುಪ್ಪೆ ಶಂಕರೇಗೌಡ, ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಕೊಪ್ಪಲು ಸಿ.ಎನ್.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಗರಶೆಟ್ಟಹಳ್ಳಿ ಸುರೇಶ್, ಸಾಮರಯ್ಯ ಪ್ರಾಥಮಿಕ‌ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಯ್ಯದ್ ರಿಜ್ವಾನ್ ಅಭಿನಂದಿಸಿದ್ದಾರೆ

RELATED ARTICLES
- Advertisment -
Google search engine

Most Popular