Saturday, April 19, 2025
Google search engine

Homeರಾಜ್ಯಸುದ್ದಿಜಾಲಶಿಕ್ಷಕರು ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ-ಶಾಸಕ ಡಿ.ರವಿಶಂಕರ್

ಶಿಕ್ಷಕರು ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ-ಶಾಸಕ ಡಿ.ರವಿಶಂಕರ್

ಕೆ.ಆರ್.ನಗರ: ಗ್ರಾಮೀಣ ಭಾಗದ ಮಕ್ಕಳಲ್ಲಿ ಹೆಚ್ಚಾಗಿ ಪ್ರತಿಭೆಗಳಿದ್ದು ಅಂತಹಾ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಆಗ ವಿದ್ಯಾರ್ಥಿಗಳು ಎಲ್ಲಾ ರಂಗದಲ್ಲೂ ಸಾಧನೆ ಮಾಡಲಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆ ಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಕಂಡು ಅವರುಗಳ ಎಲ್ಲಾ ರೀತಿಯ ಬೆಳವಣಿಗೆಗೆ ಕಾರಣಕರ್ತರಾಗಬೇಕು ಎಂದರು.
ಬಾಲ್ಯದಲ್ಲಿರುವ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಸರ್ಕಾರ ಪ್ರತಿಭಾ ಕಾರಂಜಿಯoತಹಾ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ತಾಲೂಕು ಮಟ್ಟದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲೂ ಗುರುತಿಸಿಕೊಳ್ಳುವಂತೆ ಸಲಹೆ ನೀಡಿದರು.
ಡಾ.ರಾಜ್‌ಕುಮಾರ್‌ರವರು ಶಿಕ್ಷಣ ಪಡೆಯದಿದ್ದರೂ ಅವರ ಪ್ರತಿಭೆಯಿಂದ ಕನ್ನಡದ ಮೇರು ನಟನಾಗಿ ಖ್ಯಾತಿ ಪಡೆದಿದ್ದರು ಇಂದಿನ ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಬಹಳ ಪ್ರಮುಖವಾದ್ದದ್ದು ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಅರಿತು ಅವರಿಗೆ ಉತ್ತಮ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಸ್ಪರ್ಧಾಳುಗಳನ್ನಾಗಿ ಮಾಡಬೇಕು ಇದರ ಜತೆಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಜಾತ್ಯಾತೀತ ಮನೋಭಾವನೆ ಬೆಳೆಸಬೇಕು ಎಂದು ಸೂಚಿಸಿದ ಶಾಸಕರು ಒಳ್ಳೆಯ ಸಂಸ್ಕಾರ ಕಲಿಸುವ ಮೂಲಕ ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಮನವಿ ಮಾಡಿದರು.
ಕಾಳೇನಹಳ್ಳಿ ಗ್ರಾಮದ ಪಂಚಾಯಿತಿ ಸದಸ್ಯ ಕೆ.ಪಿ.ಜಗದೀಶ್‌ರವರು ದೊಡ್ಡೇಕೊಪ್ಪಲು ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ೩೧ ಲಕ್ಷ ರೂಗಳಲ್ಲಿ ಆದರ್ಶ ಶಾಲೆಯ ಉದ್ಯಾನವನ ಮತ್ತು ಕಾಂಪೌoಡ್ ನಿರ್ಮಿಸುವುದರ ಜತೆಗೆ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿದ್ದಾರೆ ಎಂದು ಮಾಹಿತಿ ನೀಡಿದ ಶಾಸಕ ಡಿ.ರವಿಶಂಕರ್ ಶಾಲೆಯ ಮುಂಭಾಗ ಇರುವ ಕೆರೆಯನ್ನು ಸ್ವಚ್ಚಗೊಳಿಸಿ ವಾಯು ವಿಹಾರ ಮಾಡುವವರಿಗೆ ಅನುಕೂಲ ಕಲ್ಪಿಸಿದ್ದಾರೆ ಇದರಿಂದ ಶಾಲೆಯ ಸೌಂದರ್ಯ ಹೆಚ್ಚಾಗಿದೆ ಅದಕ್ಕಾಗಿ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿರೇವಣ್ಣ, ಸದಸ್ಯರಾದ ಸುನೀತಾ, ಚೌಕಳ್ಳಿಶೇಖರ್, ಶ್ವೇತಾರವಿ, ಕೆ.ಪಿ.ಜಗದೀಶ್, ಉಮೇಶ್, ಬಿಇಒ ಆರ್.ಕೃಷ್ಣಪ್ಪ, ಬಿಆರ್‌ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ದಾಸಪ್ಪ, ಕಿರಣ್‌ಕುಮಾರ್, ಮುಖ್ಯಾಧಿಕಾರಿ ಡಾ.ಜಯಣ್ಣ, ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಆದರ್ಶ ಶಾಲೆಯ ಮುಖ್ಯಶಿಕ್ಷಕಿ ರುಕ್ಮಿಣಿ, ಎಸ್‌ಡಿಎಂಸಿ ಅಧ್ಯಕ್ಷ ಧರ್ಮರಾಜ್, ಸದಸ್ಯ ದೊಡ್ಡಕೊಪ್ಪಲುರವಿ, ಸಿಆರ್‌ಪಿ ವಸಂತ್‌ಕುಮಾರ್, ಶಿಕ್ಷಕರಾದ ನಾರಾಯಣಪ್ರಸಾದ್, ಮಧುಕುಮಾರ್, ಲಕ್ಷಿö್ಮಕಾಂತ್, ರಶ್ಮಿಮಂಜುನಾಥ್, ಸಿ.ಎನ್.ಸ್ವಾಮಿ, ಕೆ.ಪಿ.ಭಾರತಿ ಮತ್ತಿತರರು ಹಾಜರಿದ್ದರು

RELATED ARTICLES
- Advertisment -
Google search engine

Most Popular